ಜಿಲೆಟಿನ್ ಸ್ಫೋಟ ದುರಂತ: ಪ್ರಮುಖ ಆರೋಪಿ ನಾಗರಾಜ್ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಹಾಗೂ ದಕ್ಷಿಣ ರೈಲ್ವೆ ಸಲಹಾ ಸಮಿತಿ ಸದಸ್ಯ ಗುಡಿಬಂಡೆ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತೊಬ್ಬ ಆರೋಪಿ ತಮಿಳುನಾಡು ಮೂಲದ ಸ್ಫೋಟಕಕಾರ ಗಣೇಶ್ನನ್ನು ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಈವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಮುಖ ಆರೋಪಿ ನಾಗರಾಜ್, ಚಾಲಕ ರಿಯಾಜ್, ಮಧುಸೂದನ್ ರೆಡ್ಡಿ , ಪ್ರವೀಣ್, ವೆಂಕಟೇಶ ರೆಡ್ಡಿ, ರಾಘವೇಂದ್ರ ರೆಡ್ಡಿ, ಗಣೇಶ್ ಮತ್ತು ವೆಂಕಟಶಿವಾರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ.
ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಗುಡಿಬಂಡೆ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಗುಡಿಬಂಡೆ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
ಗಣಿ ಸ್ಫೋಟಕಗಳ ನಿರ್ವಹಣೆ: ನಿರ್ದಿಷ್ಟ ನಿಯಮಗಳೇ ಇಲ್ಲ
ಸಿಐಡಿ ತಂಡ ಭೇಟಿ: ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತಂಡಕ್ಕೆ ವರ್ಗಾಯಿಸಿದೆ. ಇದರ ಬೆನ್ನಲ್ಲೇ ಸಿಐಡಿ ಎಸ್ಪಿ ರಾಹುಲ್ ನೇತೃತ್ವದ ಎರಡು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.