ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನದ ಪಾವಿತ್ರ್ಯ ಕಾಪಾಡಿ: ನ್ಯಾಯಾಧೀಶ ಎಸ್.ಎಂ.ಅರುಟಗಿ ಕರೆ

ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶ ಎಸ್.ಎಂ.ಅರುಟಗಿ ಕರೆ
Last Updated 26 ಜನವರಿ 2021, 2:40 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಮತದಾರರು ಮತದಾನದ ಪಾವಿತ್ರ್ಯವನ್ನು ಕಾಪಾಡುವುದರ ಮೂಲಕ ಉತ್ತಮ ಸಮಾಜ ನಿರ್ಮಿಸಬೇಕು ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಂ. ಅರುಟಗಿರವರು ಕರೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಇಎಲ್‌ಸಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು. 18 ವರ್ಷದ ನಂತರ ಇರುವವರಿಗೆ ಸಂವಿಧಾನ ಮತದಾನದ ಹಕ್ಕು ನೀಡಿದೆ. ಮತದಾರರು ನಿರ್ಭೀತಿ, ಭಯ, ಅಂಜಿಕೆ ಇಲ್ಲದೇ ಮತದಾನ ಮಾಡಬಹುದು. ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ನೀಡಿದೆ. ಮತಗಳನ್ನು ಯಾವುದೇ ಕಾರಣಕ್ಕೂ ಆಸೆ, ಆಮಿಷಗಳಿಗೆ ಹಣ ಹೆಂಡಗಳಿಗೆ ಮಾರಾಟ ಮಾಡಿಕೊಳ್ಳಬಾರದು. ಯುವ ಮತದಾರರು ಮತದಾನದ ಪಾವಿತ್ರ್ಯವನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಮಾತನಾಡಿ, ಸಂವಿಧಾನ ಮತದಾನದ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದೆ. ಮತದಾರರು ಸಂವಿಧಾನದ ಆಶಯ ಹಾಗೂ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ಸಂವಿಧಾನದ ಹಕ್ಕುಗಳನ್ನು ತಿಳಿದುಕೊಂಡು, ಜನರಲ್ಲಿ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರೌಢಶಾಲಾ, ಪದವಿ ಪೂರ್ವ, ಪದವಿ ಕಾಲೇಜುಗಳಲ್ಲಿ ಹಮ್ಮಿಕೊಂಡ ಪ್ರಬಂಧ, ರಸಪ್ರಶ್ನೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಗಣ್ಯರು ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಿದರು. ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿಗಳನ್ನು ವಿತರಿಸಿದರು.

ತಹಶೀಲ್ದಾರ್ ಎನ್.ಕೃಷ್ಣಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ಪುರಸಭಾ ಮುಖ್ಯಾಧಿಕಾರಿ ಪಂಕಜಾರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ನಂಜುಂಡಪ್ಪ, ವಕೀಲ ಬಿ.ಎಸ್.ನಾಗಭೂಷಣ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಆರ್.ಹನುಮಂತರೆಡ್ಡಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ, ಲೋಕೊಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಎಸ್.ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿ.ಎನ್.ಶೇಷಾದ್ರಿ, ತಾಲ್ಲೂಕು ಸಾಕ್ಷರತಾ ಅಧಿಕಾರಿ ಎನ್.ಶಿವಪ್ಪ, ಅಂಗನವಾಡಿ ಮೇಲ್ವಿಚಾರಕಿ ಅನ್ಸೂಬಾಯಿ ಸೇರಿದಂತೆ ಬ್ಲಾಕ್ ಹಂತದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT