ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಅಚ್ಚುಕಟ್ಟಾಗಿ ಪ್ರತಿಜ್ಞಾ ಕಾರ್ಯಕ್ರಮ ರೂಪಿಸಿ

ಕಾಂಗ್ರೆಸ್‌ ಕಾರ್ಯಕರ್ತರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಸೂಚನೆ
Last Updated 30 ಜೂನ್ 2020, 11:08 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ವೀಕ್ಷಣೆಗೆ ಜಿಲ್ಲೆಯ ಎಲ್ಲ ಬ್ಲಾಕ್‌ಗಳಲ್ಲಿ ಭರದ ಸಿದ್ಧತೆ ನಡೆದಿದೆ. ಪ್ರತಿಯೊಬ್ಬ ಕಾರ್ಯಕರ್ತರು ಪ್ರತಿಜ್ಞಾ ಕಾರ್ಯಕ್ರಮವನ್ನು ತಮ್ಮ ಮನೆ ಕಾರ್ಯಕ್ರಮದಂತೆ ಭಾವಿಸಿ ಯಶಸ್ವಿಗೊಳಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರತಿಜ್ಞಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಜುಲೈ 2ರಂದು ನಡೆಯಲಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಹಾಗೂ ಸ್ಥಳೀಯವಾಗಿ ಕಾರ್ಯಕರ್ತರ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಬ್ಲಾಕ್‌ಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲಿನ ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಸುಮಾರು 180 ಗ್ರಾಮ ಪಂಚಾಯಿತಿ ಮತ್ತು ನಗರಸಭೆಯ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಅಂತರ ಕಾಪಾಡಿಕೊಂಡು ಕಾರ್ಯಕ್ರಮ ರೂಪಿಸಬೇಕು’ ಎಂದರು.

‘ಎಲ್ಲಾ ಕಾರ್ಯಕರ್ತರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ತಪ್ಪದೇ ಬಳಸಬೇಕು. ಇಡೀ ರಾಜ್ಯದಲ್ಲಿ ಸುಮಾರು 7,800 ಹೆಚ್ಚು ಕಡೆ ನಡೆಯಲಿರುವ ಕಾರ್ಯಕ್ರಮ ಇಡೀ ದೇಶದಲ್ಲೇ ದಾಖಲೆ ಆಗಲಿದೆ. ಸುಮಾರು ಒಂದೂವರೆ ಗಂಟೆ ಕಾಲ ಎಲ್ಲಾ ರಾಜ್ಯ ಮಟ್ಟದ ಮಾಧ್ಯಮಗಳಲ್ಲಿ ಏಕಕಾಲದಲ್ಲಿ ನೇರಪ್ರಸಾರವಾಗಲಿದೆ’ ಎಂದು ಹೇಳಿದರು.

‘ಕಾರ್ಯಕ್ರಮ ಮುಗಿದ ನಂತರ ಹಿರಿಯರ ಮೂಲಕ ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ಹಿತವಚನ ಮತ್ತು ಭಾಷಣ ಮಾಡಿಸಬೇಕು. ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯ ವಿಚಾರವಾಗಿ ಚರ್ಚೆ ನಡೆಸಬೇಕು’ ಎಂದರು.

ಮುಖಂಡರಾದ ಯಲುವಹಳ್ಳಿ ರಮೇಶ್, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣ ಮತ್ತು ಜಯರಾಂ, ಮುಖಂಡರಾದ ಕೃಷ್ಣಪ್ಪ, ವೆಂಕಟೇಶ್, ಸುರೇಶ್, ಮುನೀಂದ್ರ, ಕುಬೇರ್ ಅಚ್ಚು, ಪಟ್ರೇನಹಳ್ಳಿ ಕೃಷ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT