ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್, ಗಾಂಧಿ ಆದರ್ಶ ಮೈಗೂಡಿಸಿಕೊಳ್ಳಿ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಚಿತ್ರ ಪ್ರದರ್ಶನ
Last Updated 24 ಜನವರಿ 2020, 14:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಮತ್ತು ಗಾಂಧೀಜಿ ಅವರ ತತ್ವಾದರ್ಶಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡಗೆಯನ್ನು ನೀಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಜಿ.ನಾಗೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೆಂಟ್ ಜೋಸೆಫ್ ಶಾಲೆ ಹಾಗೂ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಸೆಂಟ್ ಜೋಸೆಫ್ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಚಲನಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ಮತ್ತು ಗಾಂಧೀಜಿ ಅವರ ಜೀವನದ ಆದರ್ಶಗಳು, ಸಾಧನೆಗಳು ಮತ್ತು ಹೋರಾಟಗಳು ಶಾಶ್ವತ. ಹೀಗಾಗಿ ಈ ಭೂಮಿ ಇರುವವರೆಗೂ ಅವರು ಜನಮಾನಸದಲ್ಲಿ ಜೀವಂತವಾಗಿರುತ್ತಾರೆ. ಭಾರತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಅಂಬೇಡ್ಕರ್ ಅವರು ರಚನೆ ಮಾಡಿದ ಸಂವಿಧಾನ ಪ್ರಮುಖ ಕಾರಣ’ ಎಂದು ಹೇಳಿದರು.

ರಿಚರ್ಡ್ ಅಟೆನ್ ಬರೋ ನಿರ್ದೇಶನದ ‘ಗಾಂಧಿ’ ಹಾಗೂ ಜಬ್ಬಾರ್ ಪಟೇಲ್ ನಿರ್ದೇಶನದ ‘ಬಿ.ಆರ್. ಅಂಬೇಡ್ಕರ್‘ ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು. ಸೆಂಟ್ ಜೊಸೆಫ್ ಶಾಲೆಯ ವ್ಯವಸ್ಥಾಪಕಿ ಉತ್ತಯ್ಯ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಆಂಜಿನಪ್ಪ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಜುಂಜಣ್ಣ ಎಂ. ವಾರ್ತಾ ಸಹಾಯಕಿ ಸಿ.ಮೈನಾಶ್ರೀ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT