ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಪೋಲಿಯೊ ಹನಿ ಕಡ್ಡಾಯವಾಗಿ ಹಾಕಿಸಿ; ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ

ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನಕ್ಕೆ ಚಾಲನೆ; ಮನೆಮನೆಗೆ ಆಶಾ ಕಾರ್ಯಕರ್ತೆಯರು
Last Updated 1 ಫೆಬ್ರುವರಿ 2021, 4:20 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಮಕ್ಕಳಿಗೆ ಪೋಲಿಯೊ ಹನಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ ಮಾತನಾಡಿ, 0-5 ವರ್ಷದ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು. ಮಕ್ಕಳ ಆರೋಗ್ಯದ ಕಡೆ ಗಮನ ಇರಬೇಕು. ರೋಗಗಳು ಹರಡುವ ಮುನ್ನ ಎಚ್ಚರ ಇರಬೇಕು. ಅನೇಕ ರೋಗಗಳ ಹರಡುವಿಕೆಯಿಂದ ಅಮೂಲ್ಯವಾದ ಪ್ರಾಣಗಳುಕಳೆದು ಹೋಗುತ್ತದೆ. ಇದರಿಂದ ಆರೋಗ್ಯದ ಕಡೆ ಗಮನಇರಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಮಾತನಾಡಿ, ಅಂಗವಿಕಲತೆ ಆಗಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 0-5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಮಾಡಿದೆ. ಆರೋಗ್ಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ಮಾಡುತ್ತಾರೆ. ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿ. ಪೋಲಿಯೊ ಮುಕ್ತರಾಗಿ ಮಾಡಿ ಎಂದು ತಿಳಿಸಿದರು.

ಆರೋಗ್ಯ ಹಿರಿಯ ಸಹಾಯಕ ಮಹಮದ್ ಸುಭಾನ್, ಹಿರಿಯ ಶುಶ್ರೂಷಕಿ ಸರಸ್ವತಮ್ಮ, ಕಾರ್ಯಕ್ರಮದ ಅಧಿಕಾರಿ ಮುಸ್ತಾಕ್,ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT