ಶಿಡ್ಲಘಟ್ಟ: ಗ್ರಾಮಗಳ ಕಲ್ಯಾಣಿಗಳು ಸಾಂಸ್ಕೃತಿಕ ಹಾಗೂ ಜಲಸಂಪನ್ಮೂಲಗಳ ಪ್ರತೀಕಗಳಾಗಿವೆ. ಸ್ವಚ್ಛತಾ ಕಾರ್ಯಕ್ರಮ ಮೂಲಕ ಇವುಗಳನ್ನು ಕಾಪಾಡಿ, ರೈತರಿಗೆ ಉಪಯುಕ್ತವಾಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಂತಹ ಶ್ರಮದಾನ ಗ್ರಾಮೀಣ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಎಲ್ಲರೂ ಸಹಕರಿಸಿ ಸ್ವಚ್ಛ ಗ್ರಾಮಗಳನ್ನು ನಿರ್ಮಿಸೋಣ ಎಂದು ಶಾಸಕ ಬಿ.ಎನ್.ರವಿಕುಮಾರ್ ಸಲಹೆ ನೀಡಿದರು.

ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಶೆಟ್ಟಿಪುರ ಗ್ರಾಮದ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹೂಳು ತುಂಬಿದ್ದ ಈ ಕಲ್ಯಾಣಿ ಸ್ವಚ್ಛಗೊಳಿಸುವ ಮೂಲಕ ಮುಂದೆ ರೈತರ ಜಾನುವಾರುಗಳಿಗೆ ಮತ್ತು ಭೂಜಲ ಸಂರಕ್ಷಣೆಗೆ ಅನುಕೂಲ ಮಾಡಿಕೊಡಲಾಗಿದೆ. ಸ್ವಚ್ಛತೆಯೇ ದೇವರು. ಸ್ವಚ್ಛತೆಯೇ ಸೇವೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಮಾತನಾಡಿ, ಮಲ್ಲಿಶೆಟ್ಟಿಪುರ ಕಲ್ಯಾಣಿಗೆ ಶತಮಾನದ ಇತಿಹಾಸವಿದೆ. ಮಣ್ಣು, ಕಸ, ಕಡ್ಡಿ ತುಂಬಿಕೊಂಡು ತಳಭಾಗದಲ್ಲಿ ಕಲ್ಲು ಸೇರಿಕೊಂಡಿದ್ದರಿಂದ ನೀರು ಸಂಗ್ರಹವಾಗುತ್ತಿರಲಿಲ್ಲ. ಈ ಅಭಿಯಾನದಲ್ಲಿ 100ಕ್ಕೂ ಹೆಚ್ಚು ಜನರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ಮರೆಯಾಗಿದ್ದ ಅಥವಾ ತ್ಯಾಜ್ಯದಿಂದ ತುಂಬಿದ್ದ ಪ್ರಾಚೀನ ಕಲ್ಯಾಣಿಗಳಿಗೆ ಪುನಶ್ಚೇತನ ನೀಡಲಾಗುತ್ತಿದೆ. ಅಂತರ್ಜಲ ಮಟ್ಟ ಹೆಚ್ಚಿಸಿ ಜಲಮೂಲ ಸಂರಕ್ಷಿಸುವುದು ಈ ಅಭಿಯಾನದ ಮುಖ್ಯ ಗುರಿ ಎಂದು ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ.ಆರ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಪೌರಾಯುಕ್ತೆ ಜಿ.ಅಮೃತ, ತುಮ್ಮನಹಳ್ಳಿ ಪಿಡಿಒ ಕ್ಯಾತ್ಯಾಯಿನಿ, ವಿವಿಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕೃಷಿ ಸಹಾಯಕ ನಿರ್ದೇಶಕ ರವಿ, ರೇಷ್ಮೆ ಸಹಾಯಕ ನಿರ್ದೇಶಕ ಅಕ್ಮಲ್ ಪಾಷಾ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಮಂಜುಳ.ಪಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-16-1305177187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.