ಗೌರಿಬಿದನೂರು: ಲಾಂಗ್ನಿಂದ ಕೇಕ್ ಕತ್ತರಿಸಿ ತನ್ನ ಹುಟ್ಟುಹಬ್ಬ ಆಚರಿಸಿಕೊಂಡು, ಅದರ ಫೋಟೊ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಲ್ಲೂಕಿನ ವೈಚಕೂರಹಳ್ಳಿ ಗ್ರಾಮದ ಆಟೊ ಚಾಲಕ ಅನಿಲ್ ಕುಮಾರ್ (24) ಬಂಧಿತ ಆರೋಪಿ. ಆರೋಪಿಯು ಭಾನುವಾರ ರಾತ್ರಿ ತನ್ನ 24ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ. ಈ ವೇಳೆ ಲಾಂಗ್ ಹಿಡಿದು ಕೇಕ್ ಕತ್ತರಿಸಿದ್ದ ಆತ, ಅದರ ವಿಡಿಯೊ ಮತ್ತು ಫೋಟೊಗಳನ್ನು ಆತನ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.