ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Published 7 ಜುಲೈ 2024, 14:36 IST
Last Updated 7 ಜುಲೈ 2024, 14:36 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಚಿನ್ನಸಂದ್ರ-ಆಲಂಬಗಿರಿ ರಸ್ತೆಯಲ್ಲಿ ಭಾನುವಾರ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ಚಿನ್ನಸಂದ್ರ ಗ್ರಾಮದ ಮುಬಾರಕ್ ಬಂಧಿತ ಆರೋಪಿ. ಆತನಿಂದ 300 ಗ್ರಾಂ ಗಾಂಜಾ ಮತ್ತು ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ.

ಚಿನ್ನಸಂದ್ರದಿಂದ ಆಲಂಬಗಿರಿ ಗ್ರಾಮದ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಗಾಂಜಾ ಬ್ಯಾಗ್‌ ಹಿಡಿದು ನಿಂತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ನಾಗೇದ್ರ ಪ್ರಸಾದ್ ಮತ್ತು ತಂಡ ದಾಳಿ ನಡೆಸಿ ಬಂಧಿಸಿದೆ.

ಚಂದ್ರಪ್ಪ, ಸುರೇಶ್, ನರೇಶ್, ವೆಂಕಟರವಣ, ಅಶೋಕ್ ದಾಳಿಯ ತಂಡದಲ್ಲಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT