ಶಿಡ್ಲಘಟ್ಟ: ನಗರದ ಕೋಟೆ ವೃತ್ತದ ಬಳಿ ಇರುವ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ತೈಬಾ ನಗರದ ಶೇರ್ ಅಲಿ ಖಾನ್(52) ಎಂದು ಗುರುತಿಸಲಾಗಿದೆ.
ಬಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಶೇರ್ ಅಲಿ ಖಾನ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.