ಮಂಚೇನಹಳ್ಳಿ: ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್ ಪೂರ್ಣಿಮಾ ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಗೆ ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಸಭೆ ಬಹಿಷ್ಕರಿಸಿ, ಹೊರ ನಡೆದರು.

ಸಭೆಯಿಂದ ಹೊರಬಂದ ದಲಿತ ಮುಖಂಡರು ತಾಲ್ಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡ ನರಸಿಂಹಮೂರ್ತಿ ಮಾತನಾಡಿ, ಅಂಬೇಡ್ಕರ್ ಜಯಂತಿಯಂತಹ ಮಹತ್ವದ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ದಲಿತ ನಾಯಕರು ಮಾತ್ರ ಭಾಗವಹಿಸಿದ್ದೇವೆ. ಆದರೆ, ಇಒ, ಪಿಡಿಒ ಸೇರಿದಂತೆ ಯಾವುದೇ ಅಧಿಕಾರಿಗಳು ಬಂದಿಲ್ಲ. ಇದು ಅಧಿಕಾರಿಗಳ ದಲಿತ ವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತದೆ. ನಾವು ಸಭೆಯಲ್ಲಿ ಭಾಗವಹಿಸುವುದಿಲ್ಲ, ತಾಲ್ಲೂಕು ಆಡಳಿತದ ವಿರೋಧಿ ನೀತಿ ಖಂಡಿಸಿ ಸಭೆ ಬಹಿಷ್ಕರಿಸುತ್ತಿದ್ದೇವೆ ಎಂದು ಹೇಳಿದರು.

ದಲಿತ ಮುಖಂಡ ನಾರಾಯಣಸ್ವಾಮಿ ಮಾತನಾಡಿ, ತಹಶೀಲ್ದಾರ್ ಪೂರ್ಣಿಮಾ ಈ ಹಿಂದೆಯೂ ಸಭೆ ಕರೆದು ಏಕಾಏಕಿ ಮುಂದೂಡಿದ್ದರು. ಈಗ ಸಭೆ ಕರೆದಿದ್ದರೂ ತಹಶೀಲ್ದಾರ್ ಅವರೇ ಅರ್ಧ ಘಂಟೆ ತಡವಾಗಿ ಬಂದಿದ್ದಾರೆ. ಜಯಂತಿಗಳನ್ನು ಗಂಭೀರವಾಗಿ ಪರಿಗಣಿಸಿ ದಲಿತರ ಭಾವನೆಗಳಿಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪಗೌಡ ನಾಯ್ಕರ್ ಮತ್ತು ದಲಿತ ಸಮುದಾಯದ ವಿಜಯಕುಮಾರ್, ಕೃಷ್ಣಮೂರ್ತಿ, ವೆಂಕಟೇಶ್, ಮೂರ್ತಿ, ಸುಬ್ರಹ್ಮಣ್ಯ, ಚಿಕ್ಕನರಸಿಂಹಪ್ಪ, ಗಂಗಣ್ಣ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-16-1901154606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.