ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಎರಡೂವರೆ ವರ್ಷದಲ್ಲಿ ರಸ್ತೆ ಅಪಘಾತಕ್ಕೆ 782 ಜನರ ಬಲಿ

ಎರಡೂವರೆ ವರ್ಷದಲ್ಲಿ ಮೋಟರ್ ವಾಹನ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ 1.35 ಲಕ್ಷ ಪ್ರಕರಣ
Published : 16 ಏಪ್ರಿಲ್ 2025, 7:11 IST
Last Updated : 16 ಏಪ್ರಿಲ್ 2025, 7:11 IST
ಫಾಲೋ ಮಾಡಿ
Comments
ಪಿ.ಎನ್.ರವೀಂದ್ರ
ಪಿ.ಎನ್.ರವೀಂದ್ರ
ಹೊಸದಾಗಿ 253 ಅಪಘಾತ ವಲಯ ಗುರುತು
ರಾಷ್ಟ್ರೀಯ ಹೆದ್ದಾರಿಯಷ್ಟೇ ಅಲ್ಲ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿಯೂ ಅಪಘಾತಗಳು ನಡೆಯುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹೊಸದಾಗಿ 253 ಅಪಘಾತ ಸ್ಥಳಗಳನ್ನು ಗುರುತಿಸಿದೆ.
‘ಸಂಚಾರ ನಿಯಮ ಪಾಲನೆ ಅಗತ್ಯ’
ಹೆಚ್ಚು ಅಪಘಾತಗಳು ನಡೆಯುತ್ತಿದ್ದ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲದೆ ತಿರುವುಗಳಲ್ಲಿಯೂ ವಾಹನಗಳು ನಿಧಾನವಾಗಿ ಸಾಗುವಂತೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸಭೆ ಸಹ ನಡೆಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು. ನಾಗರಿಕರು ಸಹ ರಸ್ತೆ ನಿಯಮಗಳನ್ನು ಪಾಲಿಸಬೇಕು. ತಿರುವುಗಳಲ್ಲಿ ಅತಿಯಾದ ವೇಗದ ಚಾಲನೆ ಒಳ್ಳೆಯದಲ್ಲ. ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿದರೆ ದೊಡ್ಡ ಪ್ರಮಾಣದಲ್ಲಿಯೇ ಅಪಘಾತಗಳನ್ನು ತಡೆಯಬಹುದು ಎಂದು ಹೇಳಿದರು.
‘ಸಂಜೆ ವೇಳೆ ನಿಗಾವಹಿಸಿ’
ಜಿಲ್ಲೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ 17  ಮತ್ತು ರಾಜ್ಯ ಹೆದ್ದಾರಿಗಳಲ್ಲಿ 11 ಬ್ಲಾಕ್  ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಈ ಬ್ಲಾಕ್‌ಸ್ಪಾಟ್‌ಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ. ಕಳೆದ 7 ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಜೆ 6 ರಿಂದ 9ರವರೆಗೆ 118 ಅಪಘಾತಗಳು  ಸಂಭವಿಸಿವೆ. ಈ ಅವಧಿಯಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT