ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟದ ಪ್ರಶಸ್ತಿಗೆ ಮಾರಪ್ಪಲ್ಲಿ ಸರ್ಕಾರಿ ಶಾಲೆ ನಾಮನಿರ್ದೇಶನ

ರಾಷ್ಟ್ರಮಟ್ಟದ ಪ್ರಶಸ್ತಿಗೆ ನಾಮನಿರ್ದೇಶನ
Last Updated 30 ಜುಲೈ 2022, 5:09 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಕೈವಾರ ಹೋಬಳಿಯ ಮರಪ್ಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು 2021-22ನೇ ಸಾಲಿನ ರಾಜ್ಯಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಪ್ರಶಸ್ತಿಪಡೆದು ರಾಷ್ಟ್ರಮಟ್ಟದ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ಉತ್ತಮ ವಾತಾವರಣ ಹೊಂದಿರುವ ಈ ಶಾಲೆಯು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದೆ. ಈಗ ರಾಜ್ಯಮಟ್ಟದ ಪ್ರಶಸ್ತಿ ಪಡೆಯುವುದರ ಮೂಲಕ ಮತ್ತೊಂದು ಗರಿಯನ್ನು ತನ್ನ ಮುಕುಟಕ್ಕೇರಿಸಿಕೊಂಡಿದೆ.

ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದ ಸಮಿತಿಯು ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಿ 8 ಶಾಲೆಗಳನ್ನು ಆಯ್ಕೆ ಮಾಡಿ ಜಿಲ್ಲಾ ಹಂತಕ್ಕೆ ಕಳುಹಿಸಿಕೊಟ್ಟಿತ್ತು. ಜಿಲ್ಲಾ ಹಂತದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿಧ ತಾಲ್ಲೂಕುಗಳಿಂದ ಕಳುಹಿಸಲಾಗಿದ್ದ ಶಾಲೆಗಳ ಪರಿಸೀಲನೆ ನಡೆಸಿ ಜಿಲ್ಲೆಯಿಂದ 14 ಶಾಲೆಗಳನ್ನು ರಾಜ್ಯಮಟ್ಟಕ್ಕೆ ಕಳುಹಿಸಲಾಗಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಮತ್ತು ಒಬ್ಬ ವಿಷಯ ಪರಿಣತರು ಈ ಸಮಿತಿಯಲ್ಲಿ ಇರುತ್ತಾರೆ.

ರಾಜ್ಯದ 34 ಜಿಲ್ಲೆಗಳಿಂದ ತಲಾ 14 ಶಾಲೆಗಳಂತೆ ಒಟ್ಟು 476 ಶಾಲೆಗಳನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಿ ಕಳುಹಿಸಲಾಗಿತ್ತು. ರಾಜ್ಯ ಮಟ್ಟದ ಸಮಿತಿಯು 476 ಶಾಲೆಗಳ ಪರಿಶೀಲನೆ ನಡೆಸಿ 26 ಶಾಲೆಗಳನ್ನು ಆಯ್ಕೆ ಮಾಡಿ ರಾಷ್ಟ್ರಮಟ್ಟಕ್ಕೆ ಕಳುಹಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ಶಾಲೆ ಇದಾಗಿದೆ.

ಕೇಂದ್ರ ಶಿಕ್ಷಣ ಮಂತ್ರಾಲಯ, ಶಿಕ್ಷಣ ಇಲಾಖೆ ಮತ್ತು ಸಾಕ್ಷರತೆ ಸಮಿತಿಯು 26 ಶಾಲೆಗಳ ಪರಿಶೀಲನೆ ನಡೆಸಿ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ.

ರಾಜ್ಯಮಟ್ಟದ ಪ್ರಶಸ್ತಿ ಪಡೆದ ಶಾಲೆಗಳಿಗೆ ಜುಲೈ 30ರಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ, ಆಯಾ ಶಾಲೆಗಳ ಮುಖ್ಯೋಪಾದ್ಯಾಯರನ್ನು ಸನ್ಮಾನಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT