ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆ: ಫುಟ್‌ಪಾತ್ ಅತಿಕ್ರಮಣ ತೆರವು

Last Updated 11 ಆಗಸ್ಟ್ 2021, 2:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಬಲಮುರಿ ವೃತ್ತದ ಮಾರುಕಟ್ಟೆಯಲ್ಲಿನ ಫುಟ್‌ಪಾತ್ ಅತಿಕ್ರಮಣವನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದರು. ಮಾರುಕಟ್ಟೆಯಲ್ಲಿನ ತಳ್ಳುಗಾಡಿ ವ್ಯಾಪಾರಿಗಳಿಗೆ ಮಾರುಕಟ್ಟೆ ಆವರಣದಲ್ಲಿಯೇ ಪರ್ಯಾಯ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟರು.

ಈ ವೇಳೆ ಕೆಲವು ತಳ್ಳುಗಾಡಿ ವ್ಯಾಪಾರಿಗಳು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದರು. ಆಗ ಅಧಿಕಾರಿಗಳು ‘ನಿಮ್ಮ ವ್ಯಾಪಾರಕ್ಕೆ ಪರ್ಯಾಯ ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ವ್ಯಾಪಾರ ಮಾಡಿ’ ಎಂದರು.

‘ಮಾರುಕಟ್ಟೆಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಈ ಕಾರಣದಿಂದ ತಳ್ಳುಗಾಡಿ ವ್ಯಾಪಾರಿಗಳು ಹಾಗೂ ರಸ್ತೆಯಲ್ಲಿಯೇ ವ್ಯಾಪಾರ ನಡೆಸುತ್ತಿದ್ದವರನ್ನು ತೆರವುಗೊಳಿಸಲಾಗಿದೆ. ಅವರಿಗೆ ಮಾರುಕಟ್ಟೆ ಆವರಣದಲ್ಲಿಯೇ ತಾತ್ಕಾಲಿಕವಾಗಿ ಪರ್ಯಾಯ ಸ್ಥಳ ತೋರಿಸಲಾಗಿದೆ’ ಎಂದು ನಗರಸಭೆ ಪೌರಾಯುಕ್ತ ಡಿ.ಲೋಹಿತ್ತಿಳಿಸಿದರು.

‘ಮಾರುಕಟ್ಟೆಯಲ್ಲಿನ ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಈ ಕೆಲಸ ಮಾಡಲಾಗಿದೆ. ಕೆಲವು ವ್ಯಾಪಾರಿಗಳು ಸರಕುಗಳನ್ನು ರಸ್ತೆಗೆ ಇಡುತ್ತಿದ್ದರು. ಹೀಗೆ ಫುಟ್‌ಪಾತ್‌ ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿದ್ದ ಕೆಲವರಿಗೆ ದಂಡ ವಿಧಿಸಲಾಗಿದೆ. ಮತ್ತೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT