ಚಿಕ್ಕಬಳ್ಳಾಪುರ: ಎಪಿಎಂಸಿ ಅವ್ಯವಸ್ಥೆ; ಲೋಕಾಯುಕ್ತಕ್ಕೆ ವರದಿ

ಚಿಕ್ಕಬಳ್ಳಾಪುರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಲೋಕಾಯುಕ್ತ ಕಚೇರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಜಿಲ್ಲಾ ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ವರದಿ ಸಿದ್ಧಗೊಳಿಸಿದ್ದಾರೆ.
ಎಪಿಎಂಸಿಗೆ ಲೋಕಾಯುಕ್ತ ಎಸ್‌ಪಿ ಪವನ್ ನೆಜ್ಜೂರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ದಾಖಲೆಗಳು ಸೇರಿದಂತೆ ಆವರಣವನ್ನು ಪರಿಶೀಲಿಸಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಎಪಿಎಂಸಿಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದಿದೆ. ಈ ಬಗ್ಗೆ ವಿಸ್ತೃತ ವರದಿಯನ್ನು ಸಿದ್ಧಗೊಳಿಸಲು ಮುಂದಾಗಿದ್ದಾರೆ.
ಎಪಿಎಂಸಿ ಕಚೇರಿ ಹಾಗೂ ಪ್ರಾಂಗಣವನ್ನು ಪರಿಶೀಲಿಸಲಾಗಿ ಮೂಲಸೌಕರ್ಯಗಳ ಕೊರತೆ ಇರುವುದು ಕಂಡು ಬಂದಿದೆ. ಎಪಿಎಂಸಿ ನೀಡಿರುವ ಪರವಾನಗಿ ಪ್ರಕ್ರಿಯೆಗಳಲ್ಲಿ ನಿಯಮದ ಅನುಸಾರವೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳಿಗೆ ಮತ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಲೋಕಾಯುಕ್ತರು ತಿಳಿಸಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಮತ್ತು ಪರವಾನಗಿಗಳು ನಿಯಮಾವಳಿಗಳ ಪ್ರಕಾರವಿಲ್ಲ ಎಂದು ಕೆಲವರು ವರ್ತಕರು ಹಾಗೂ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಪಿಎಂಸಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.