ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು ಎನ್‌ಎಬಿಎಚ್‌ ಮಾನ್ಯತೆ ಪಡೆಯಬೇಕು: ಡಾ.ಕೆ.ಸುಧಾಕರ್

Last Updated 29 ಫೆಬ್ರುವರಿ 2020, 14:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲೂ ಅಂತರರಾಷ್ಟ್ರೀಯ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಸಿಗಬೇಕು. ಆದ್ದರಿಂದ, ಇನ್ನು ಮುಂದೆ ಪ್ರತಿ ವೈದ್ಯಕೀಯ ಶಿಕ್ಷಣ ಕಾಲೇಜು ‘ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆಯನ್ನು ಒದಗಿಸುವ ರಾಷ್ಟ್ರೀಯ ಮಾನ್ಯತಾ ಮಂಡಳಿ’ಯಿಂದ (ಎನ್‌ಎಬಿಎಚ್‌) ಮಾನ್ಯತೆ ಪಡೆಯಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವೈದ್ಯಕೀಯ ಶಿಕ್ಷಣದಲ್ಲಿ ಚಿನ್ನದ ಪದಕ ಗಳಿಸಿದವರು, ಮೆರಿಟ್‌ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು, ಅದೇ ರೀತಿ ಹೊರ ದೇಶದ ವಿದ್ಯಾರ್ಥಿಗಳು ನಮ್ಮಲ್ಲಿ ಬಂದು ಅಧ್ಯಯನ ಮಾಡುವಂತಹ ಪ್ರತಿಭಾ ವಿನಿಮಯ ಯೋಜನೆಯನ್ನು ಈ ವರ್ಷದಿಂದಲೇ ಪರಿಚಯಿಸಲಾಗುತ್ತದೆ’ ಎಂದು ತಿಳಿಸಿದರು.

‘ಹಿರಿಯ ನಾಗರಿಕರಲ್ಲಿ ಕಂಡು ಬರುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ವಿಶೇಷ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿ ‘ಜೆರಿಯಾಟ್ರಿಕ್‌ (ವೃದ್ಧಾಪ್ಯ) ಸಂಸ್ಥೆ’ ಸ್ಥಾಪಿಸಲು ಉದ್ದೇಶಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT