ಶನಿವಾರ, ಆಗಸ್ಟ್ 13, 2022
26 °C

ಕೋವಿಡ್‌ನಿಂದ ವೈದ್ಯಾಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕಿನ ಬುರುಡಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಯುವ ವೈದ್ಯ ಡಾ.ಮನು (27) ಕೋವಿಡ್ ಸೊಂಕಿನಿಂದ ಬುಧವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಪ್ರಥಮ ವೈದ್ಯ ಮನು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ನಗರದ ಬೆಂಗಳೂರು ರಸ್ತೆ ಗುಂಡಪ್ಪ ಬಡಾವಣೆ ನಿವಾಸಿ ಡಾ.ಮನು ಬುರುಡಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದರು. ಜೂನ್ 3ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಬೆಂಗಳೂರಿನ ಆಸ್ಟರ್ ಸಿ.ಎಂ.ಐ ಆಸ್ಪತ್ರೆಯಲ್ಲಿ ದಾಖಲಿಸಲಗಿತ್ತು. ಅಂಗವಿಕಲರಾಗಿದ್ದ ಡಾ.ಮನುವನ್ನು ನಂತರ ಕೆ.ಆರ್.ಪುರಂ ನ ಲಕ್ಷ್ಮೀ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್, ಡಾ.ಬಸವಮಂಜೇಶ್, ಡಾ.ಜಯಂತಿ, ಡಾ.ಜಯರಾಮರೆಡ್ಡಿ, ಡಾ.ಅಜಯ್ ಸೇರಿದಂತೆ ಸಾರ್ವಜನಿಕ ಆಸ್ಪತ್ರೆ ಎಲ್ಲ ವೈದ್ಯರು, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು. ಅವರ ಸ್ವಂತ ಗ್ರಾಮ ತಾಲ್ಲೂಕಿನ ಧರ್ಮವಾರಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು