ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ನೌಕರರ ಸಂಘದ ಸಭೆ

Last Updated 10 ಜನವರಿ 2021, 4:46 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ನಿವೃತ್ತ ನೌಕರರ ಸಂಘವು ವರ್ಷಪೂರ್ತಿ ಹಲವಾರು ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ಜಿಲ್ಲೆಗೆ ಮಾದರಿ ಸಂಘವಾಗಿದೆ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ನಡೆದ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜಕ್ಕೆ ಹಾಗೂ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ತಮ್ಮ ಅನುಭವಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸುತ್ತಿರುವುದರಿಂದ ಜನರ ಮೆಚ್ಚುಗೆಗೂ ಪಾತ್ರವಾಗಿದೆ. ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ನಿವೃತ್ತ ನೌಕರರ ಸಂಘದ ಕಚೇರಿಯನ್ನು ನಿರ್ಮಿಸಿಕೊಳ್ಳಲು ಸ್ಥಳವನ್ನು ನೀಡಲಾಗಿದೆ. ಶಾಸಕರ ಅನುದಾನದಿಂದ ಹಣ ಮಂಜೂರಾಗಿದೆ. ಶೀಘ್ರದಲ್ಲೇ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭವಾಗುತ್ತದೆ. ನಿವೃತ್ತ ನೌಕರರ ಹಿತರಕ್ಷಣೆಗಾಗಿ ಸದಾ ಸಿದ್ಧ ಎಂದು ಭರವಸೆ ನೀಡಿದರು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಸಂಘದ ಎಲ್ಲ ಚಟುವಟಿಕೆಗಳು ಪಾರದರ್ಶಕವಾಗಿದ್ದು, ಪದಾಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ತಾಲ್ಲೂಕಿನ ಎಲ್ಲ ನಿವೃತ್ತ ನೌಕರರು ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸಂಘದ ಉಪಾಧ್ಯಕ್ಷ ಎನ್. ಲಕ್ಷ್ಮಿನಾರಾಯಣ, ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ವರದರಾಜನ್, ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಎನ್. ಶಿವರಾಮ್, ನಿವೃತ್ತ ಪ್ರಾಂಶುಪಾಲರಾದ ಅಶ್ವತ್ಥಮ್ಮ, ಸಯ್ಯದ್ ಗಫಾರ್, ಚಂದ್ರಶೇಖರಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದಾನಿಗಳು ಮತ್ತು ಕಲಾವಿದರನ್ನು ಸನ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಎಸ್. ಆಂಜನಪ್ಪ ವಾರ್ಷಿಕ ವರದಿ ಮಂಡಿಸಿದರು. ಸಂಘದಿಂದ ಗೋಡೆ ಕ್ಯಾಲೆಂಡರ್ ಮತ್ತು ಪಾಕೆಟ್ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಯಿತು. ಎ.ಎಸ್. ರಾಮಚಂದ್ರ, ಕೆ.ಎಸ್. ನಂಜುಂಡಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT