ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರಿನ ದ್ರೌಪತಮ್ಮ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವವು ಶನಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.

ಕರಗದ ಪೂಜಾರಿ ಅಭಿಲಾಷ್ ಅವರು ಹೂವಿನ ಕರಗ ಹೊತ್ತು ಮೇಲೂರು ಗ್ರಾಮದ ಪ್ರಮುಖ ವೃತ್ತಗಳಲ್ಲಿ, ತಮಟೆ ವಾದಗಳು ಮಂಗಳವಾದ್ಯಗಳ ವಾದನಗಳಿಗೆ ತಕ್ಕಂತೆ ನರ್ತಿಸಿ, ಭಕ್ತರನ್ನು ರಂಜಿಸಿದರು.

ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ವಾದ್ಯಗೋಷ್ಠಿ ಏರ್ಪಡಿಸಲಾಗಿತ್ತು. ಕರಗ ಮಹೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.

ವಹ್ನಿಕುಲ ಕ್ಷತ್ರಿಯ ತಿಗಳ ಸಮುದಾಯದ ವೀರಕುಮಾರರು, ಗೋವಿಂದ... ಗೋವಿಂದ.. ಜಯಘೋಷದೊಂದಿಗೆ ಕರಗ ಹಿಂಬಾಲಿಸಿ, ಡೀ.. ಡಿಕ್...ಎಂದು ಕತ್ತಿಗಳ ಮೂಲಕ ಆಲಗು ಸೇವೆ ಸಮರ್ಪಣೆ ಮಾಡಿದರು.

ಮೇಲೂರು ಸೇರಿದಂತೆ ಮಳ್ಳೂರು, ಮುತ್ತೂರು, ಗಂಗನಹಳ್ಳಿ ಅಪ್ಪೇಗೌಡನಹಳ್ಳಿ, ಕಂಬದಹಳ್ಳಿ, ಚೌಡಸಂದ್ರ, ಬೆಳ್ಳೂಟಿ, ಭಕ್ತರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಮಂದಿ ಕರಗ ವೀಕ್ಷಣೆಗೆ ಬಂದಿದ್ದರು. ಕರಗ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-16-1945557952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.