ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಚಿಮುಲ್ ಕ್ರಮ ಖಂಡಿಸಿ ಸಂಸದ ಕೆ.ಸುಧಾಕರ್ ಉಪವಾಸ

ಜಿಲ್ಲಾಡಳಿತ ಭವನದ ಒಳಗೆ ಡಾ. ಎಂ.ಸಿ.ಸುಧಾಕರ್ ಕೆಡಿಪಿ ಸಭೆ; ಹೊರಗೆ ಸಂಸದ ಡಾ.ಕೆ.ಸುಧಾಕರ್ ಉಪವಾಸ
Published 10 ಜುಲೈ 2024, 8:19 IST
Last Updated 10 ಜುಲೈ 2024, 8:19 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರೈತರು ಪೂರೈಸುತ್ತಿರುವ ಹಾಲಿನ ಬೆಲೆಯನ್ನು ಲೀಟರ್‌ಗೆ ₹2 ಇಳಿಕೆ ಮಾಡಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಕ್ರಮ ಖಂಡಿಸಿ ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಉಪವಾಸ ನಡೆಸುತ್ತಿದ್ದಾರೆ.

ಬೆಳಿಗ್ಗೆ 11ಕ್ಕೆ ಉಪವಾಸದ ಈ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಮತ್ತೊಂದು ಕಡೆ ಜಿಲ್ಲಾಡಳಿತ ಭವನದ ಜಿ‌ಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ‌ ಸುಧಾಕರ್ ಕೆಡಿಪಿ ಸಭೆ ನಡೆಸುತ್ತಿದ್ದಾರೆ.

ಜಿಲ್ಲಾಡಳಿತ ಭವನ ಮುಂಭಾಗ ಪೊಲೀಸ್ ಕಾವಲು ಹಾಕಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT