ಮಂಗಳವಾರ, ಜುಲೈ 14, 2020
28 °C

ಚಿಕ್ಕಬಳ್ಳಾಪುರ: ಸಚಿವ ಡಾ.ಕೆ.ಸುಧಾಕರ್ ಅವರಿಂದ ಬಡ ಜನರಿಗೆ ಆಹಾರ ಪದಾರ್ಥಗಳ ಕಿಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಲಾಕ್‌ಡೌನ್ ಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ನಿರ್ಗತಿಕರು, ಬಡ ಕಾರ್ಮಿಕರು, ಹಾಗೂ ಬಿಪಿಎಲ್‌ ಪಡಿತರದಾರರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಕಾರ್ಯಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಸುಧಾಕರ್ ಅವರು, ‘ಕ್ಷೇತ್ರದಾದ್ಯಂತ ಸುಮಾರು 50 ಸಾವಿರ ಕುಟುಂಬಗಳಿಗೆ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ಕಾರದಪುಡಿ, ಸಾಂಬಾರ್ ಪುಡಿ, ದನಿಯಾ ಪುಡಿ, ಹುಣಸೆ ಹಣ್ಣು ಇನ್ನಿತರ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್‌ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು