ಸಚಿವ ಸುಧಾಕರ್ ಕೈವಾಡ ಆರೋಪ: ವ್ಯಕ್ತಿ ಮೇಲೆ ಹಲ್ಲೆಗೆ ಮುಂದಾದ ಬೆಂಬಲಿಗರು

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಕೆ. ಸುಧಾಕರ್ ಸ್ಥಳ ಪರಿಶೀಲನೆಗೆ ಆಗಮಿಸಿದಾಗ ಸ್ಥಳೀಯ ವ್ಯಕ್ತಿಯೊಬ್ಬ ಎಲ್ಲ ನಿಮ್ಮ ಕೈವಾಡದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದ್ದು, ಸಚಿವರ ಬೆಂಬಲಿಗರು ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.
ಜಿಲೆಟಿನ್ ಸ್ಫೋಟ ನಡೆದ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿ ರಾಘವೇಂದ್ರ ಎಂಬಾತ ಸಚಿವರಿಗೆ ತರಾಟೆ ತೆಗೆದುಕೊಂಡಿದ್ದು, ನಿಮ್ಮ ಕುಮ್ಮಕ್ಕಿನಿಂದಲೇ ಕಲ್ಲು ಗಣಿಗಾರಿಕೆ, ಕ್ವಾರಿಗಳಲ್ಲಿ ಸ್ಫೋಟ ನಡೆಯುತ್ತಿದೆ. ಸ್ಫೋಟದ ಸ್ಥಳದಿಂದ 30 ಎಕರೆ ಪ್ರದೇಶ ಸಚಿವರ ಬೆಂಬಲಿಗನಿಗೆ ಸೇರಿದ್ದು, ಎಲ್ಲ ಗೊತ್ತಿದ್ದರೂ ನೀವು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾನೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹುಣಸೋಡು ಮಾದರಿ ದುರಂತ: ಜಿಲೆಟಿನ್ ಸ್ಫೋಟದಲ್ಲಿ 6 ಸಾವು
ಇದೇ ವೇಳೆ ಮಧ್ಯ ಪ್ರವೇಶಿಸಿದ ಸಚಿವರ ಬೆಂಬಲಿಗರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ವ್ಯಕ್ಯಿಯನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಚಾಲಕ ರಿಯಾಜ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.