ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಡಾ.ಕೆ.ಸುಧಾಕರ್

Last Updated 13 ಏಪ್ರಿಲ್ 2022, 11:33 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನನ್ನ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುಧಾಕರ್ ಅವರ ಕುಟುಂಬದವರೇ ಶೇ 60ರಷ್ಟು ಕಾಮಗಾರಿ ನಡೆಸುತ್ತಿದ್ದಾರೆ. ಅವರ ಪತ್ನಿಯ ಹೆಸರಿನಲ್ಲಿ ಕಾಮಗಾರಿಯ ಚೆಕ್ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಕೆಂಪಣ್ಣ ಆರೋಪಿಸಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕೆಂಪಣ್ಣ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕು. ಆಧಾರ ರಹಿತವಾಗಿ ಆರೋಪ ಮಾಡಿದ್ದು, ಅವರ ವಿರುದ್ಧ ಕ್ರಮವಹಿಸಬೇಕು. ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ’ ಎಂದರು.

ಕೆಂಪಣ್ಣ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇಂತಹವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಎಲ್ಲ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಇದು ಕಾಂಗ್ರೆಸ್‍ನವರಿಗೂ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‍ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದರು.

ಒಬ್ಬ ವ್ಯಕ್ತಿ ಬರೆದ ಅನಾಮಧೇಯ ಪತ್ರ ಅಥವಾ ಆಧಾರ ರಹಿತ ದೂರಿಗೆ ಮಾನ್ಯತೆ ನೀಡಲು ಸಾಧ್ಯವಿಲ್ಲ. ದಾಖಲೆಗಳೇ ಇಲ್ಲದೆ ಒಬ್ಬರನ್ನು ಗೇಲಿ ಮಾಡುವುದು ಅಥವಾ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವೇ ಬೇರೆ, ಈಗಿನ ವಿಚಾರವೇ ಬೇರೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ ಅವರಿಂದಲೇ ಬಂದಿದೆಯೇ ಎಂಬುದು ಯಾರಿಗೂ ಗೊತ್ತಿಲ್ಲ. ತನಿಖೆ ನಡೆಯುತ್ತಿರುವುದರಿಂದ ಕಾದು ನೋಡಬೇಕಿದೆ. ಕೆ.ಎಸ್.ಈಶ್ವರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಇದರಲ್ಲಿ ಸಿಲುಕಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ತನಿಖಾ ವರದಿ ಬಂದ ಬಳಿಕ ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT