ಶನಿವಾರ, ಆಗಸ್ಟ್ 8, 2020
23 °C
ಸಾಲ ನೀಡುವ ಕಾರ್ಯಕ್ರಮವನ್ನು ರಾಜಕೀಯಕ್ಕೆ ಬಳಸಿಕೊಂಡ ಶಾಸಕ– ಆರೋಪ

ಶಾಸಕರ ವಿರುದ್ಧ ಮುನಿಯಪ್ಪ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ಸರ್ಕಾರಿ ಹಣದಲ್ಲಿ ಹೆಣ್ಣುಮಕ್ಕಳಿಗೆ ಸಾಲ ನೀಡುವ ಕಾರ್ಯಕ್ರಮದಲ್ಲಿ ತಮ್ಮ ಸ್ವಂತ ಹಣವನ್ನು ನೀಡಿದ ಹಾಗೆ ಶಾಸಕ ವಿ.ಮುನಿಯಪ್ಪ ಕೀಳು ರಾಜಕೀಯದ ಮಾತುಗಳನ್ನು ಆಡುವುದು ಅವರ ಘನತೆಗೆ ತಕ್ಕುದಲ್ಲ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ಮೂಲಕ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುವ ಕಾರ್ಯಕ್ರಮವನ್ನು ತಮ್ಮ ರಾಜಕೀಯ ಪ್ರಚಾರಕ್ಕೆ ಶಾಸಕ ವಿ.ಮುನಿಯಪ್ಪ ಬಳಸಿಕೊಂಡಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕ್ಷೇತ್ರದ ಜನರಿಗೆ ಎಳ್ಳಷ್ಟೂ ನೆರವಾಗದೆ, ನಂಜು ಕಾರಿಕೊಳ್ಳುತ್ತಾ ತಮ್ಮ ವ್ಯಕ್ತಿತ್ವ ಅನಾವರಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಈ ಹಿಂದೆ ಓಂ ಶಕ್ತಿಗೆ ಕ್ಷೇತ್ರದ ಹೆಣ್ಣುಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಲಾಗಿತ್ತು. ಅದನ್ನು ಈಗ ಲೇವಡಿ ಮಾಡುವ ಮೂಲಕ ಶಾಸಕರು ತಮ್ಮ ಅಸಹಾಯಕತೆಯ ಪ್ರದರ್ಶನ ಮಾಡುತ್ತಿದ್ದಾರೆ. ಹಣವಿರುವವರೆಲ್ಲಾ ಸಮಾಜ ಸೇವಕರಾಗುವುದಿಲ್ಲ. ಸಮಾಜದಿಂದ ಕೇವಲ ಗಳಿಸುತ್ತಾ ಇರುವ ಶಾಸಕರು ಅದನ್ನು ಅರ್ಥಮಾಡಿಕೊಳ್ಳಬೇಕು. ಶಾಸಕರಿಗೆ ನಮ್ಮ ನಾಯಕ ಬಿ.ಎನ್.ರವಿಕುಮಾರ್ ಅವರ ಬಗ್ಗೆ ಮಾತನಾಡಲು ನೈತಿಕವಾಗಿ ಹಕ್ಕಿಲ್ಲ. ಶಾಸಕರ ಕೀಳು ರಾಜಕೀಯದ ಮಾತುಗಳನ್ನು ಖಂಡಿಸುತ್ತೇವೆ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಕಮಿಷನ್ ಕೊಡದ ಹೊರತು ಯಾವುದೇ ಕಾಮಗಾರಿಗಳು ನಡೆಯುವಂತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡರೇ ದೂರುತ್ತಿದ್ದಾರೆ.
ಕಮಿಷನ್ ಕೊಟ್ಟು ಚೆಕ್ ಡ್ಯಾಂ ಕಾಮಗಾರಿ ಮಾಡಿಸಿ ಲಕ್ಷ ರುಪಾಯಿಗಳ ಕೆಲಸವೂ ನಡೆಸದೇ ಹಣ ಲೂಟಿ ಮಾಡುತ್ತಿದ್ದಾರೆ. ಇದು ಈ ಶಾಸಕರ ಸಾಧನೆ ಎಂದು
ಆರೋಪಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ನಿರ್ದೇಶಕ ಸಿ.ನಾರಾಯಣಸ್ವಾಮಿ, ಮುಂಖಡ ತಾದೂರು ರಘು, ಚೀಮನಹಳ್ಳಿ ಗೋಪಾಲ್, ಗಂಜಿಗುಂಟೆ ನರಸಿಂಹಮೂರ್ತಿ, ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.