ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಸ್ಥಳಗಳ ಪರಿಶೀಲಿಸಿದ ಶಾಸಕ ಡಾ.ಕೆ.ಸುಧಾಕರ್

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ₹52 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಸಿದ್ಧತೆ
Last Updated 13 ಜನವರಿ 2020, 12:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಶಾಸಕ ಡಾ.ಕೆ.ಸುಧಾಕರ್ ಅವರು ಸೋಮವಾರ ಬೆಂಗಳೂರು– ಹೈದರಾಬಾದ್ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಚದುಲಪುರ ವೃತ್ತದಲ್ಲಿ ನಿರ್ಮಿಸಲಿರುವ ಮೇಲ್ಸೇತುವೆ, ದೊಡ್ಡಪೈಲಗುರ್ಕಿ ಬಳಿ ನಿರ್ಮಿಸುವ ಕೆಳಸೇತುವೆ ಕಾಮಗಾರಿ ಸ್ಥಳಗಳು ಮತ್ತು ಸಾದಲಿ ಕ್ರಾಸ್ ಮತ್ತು ತೀಲಕುಂಟಹಳ್ಳಿ ಕ್ರಾಸ್‌ ಬಳಿ ನಿರ್ಮಿಸಲಿರುವ ಸರ್ವಿಸ್ ರಸ್ತೆ ಹಾಗೂ ಮೇಲ್ಸೇತುವೆ ಕಾಮಗಾರಿ ಸ್ಥಳ ವೀಕ್ಷಣೆ ಮಾಡಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆಗೆ ಸ್ಥಳ ಪರಿಶೀಲನೆ ನಡೆಸಿದ ಸುಧಾಕರ್ ಅವರು, ‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಸುಗಮವಾಗಿ ಸಂಚರಿಸಬೇಕು ಎಂಬ ಉದ್ದೇಶಕ್ಕೆ ₹52 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಚದುಲಪುರ ವೃತ್ತ ಮತ್ತು ದೊಡ್ಡಪೈಲಗುರ್ಕಿ ಬಳಿ ಸೇತುವೆಗಳ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸೋಮಶೇಖರ್ ಈ ವೇಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT