ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಜರ್‌ ಆದಿತ್ಯಾ ಕುಮಾರ್‌ ಹೆಸರು ಎಫ್‌ಐಆರ್‌ನಲ್ಲಿ ದಾಖಲಾಗಿಲ್ಲ: ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಹೇಳಿಕೆ

Last Updated 5 ಮಾರ್ಚ್ 2018, 11:06 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದ ಸೊಫಿಯಾನ್‌ ಪ್ರದೇಶದಲ್ಲಿ ನಡೆದಿದ್ದ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯ ಮೇಜರ್‌ ಆದಿತ್ಯಾ ಕುಮಾರ್‌ ಅವರ ಹೆಸರು ಎಫ್‌ಐಆರ್‌ನಲ್ಲಿ ದಾಖಲಾಗಿಲ್ಲ ಎಂದು ಕಾಶ್ಮೀರ ಸರ್ಕಾರ ಸೋಮವಾರ ತಿಳಿಸಿದೆ.

ಈ ಪ್ರದೇಶದಲ್ಲಿ ಸೇನೆ ಜನವರಿ 27ರಂದು ‍ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದರು. ಹಾಗಾಗಿ, ಮೇಜರ್‌ ಆದಿತ್ಯಾ ಕುಮಾರ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಇದನ್ನು ರದ್ದು ಮಾಡುವಂತೆ ಆದಿತ್ಯಾ ಅವರ ತಂದೆ ಲೆಫ್ಟಿನೆಂಟ್ ಕರ್ನಲ್ ಕರ್ಮವೀರ್‌ ಸಿಂಗ್‌ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ಕಾಶ್ಮೀರ ಸರ್ಕಾರ ಎಫ್‌ಐಆರ್‌ನಲ್ಲಿ ಮೇಜರ್‌ ಆದಿತ್ಯಾ ಕುಮಾರ್‌ ಅವರ ಹೆಸರು ಇಲ್ಲ ಎಂದು ತಿಳಿಸಿರುವುದು ಅಚ್ಚರಿಗೆ ಕಾರಣವಾಗಿದೆ ಎಂದು ಸೊಫಿಯಾನ್‌ ಪ್ರದೇಶದ ನಾಗರಿಕರು ತಿಳಿಸಿದ್ದಾರೆ. 

ಆದಿತ್ಯಾ ಅವರ ತಂದೆ ಲೆಫ್ಟಿನೆಂಟ್ ಕರ್ನಲ್ ಕರ್ಮವೀರ್‌ ಸಿಂಗ್‌ ಅವರು ಮೇಜರ್‌ ಆದಿತ್ಯಾ ಕುಮಾರ್‌ ಮೇಲಿನ ಎಫ್‌ಐಆರ್‌ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 24ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT