ಶುಕ್ರವಾರ, ಡಿಸೆಂಬರ್ 4, 2020
24 °C

ಸಂಚಾರ ಸ್ವಾಬ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ಕೊರೊನಾ ಸೋಂಕಿತರ ಸಂಖ್ಯೆ ತಾಲ್ಲೂಕಿನಲ್ಲಿ ಇಳಿಮುಖವಾಗಿದೆ. ಆದರೂ ಸೋಂಕಿತರ ಸರಪಳಿ ಬೆಳೆಯದಂತೆ ನೋಡಿಕೊಳ್ಳಲು ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಖುದ್ದಾಗಿ ತೆರಳಿ ಸ್ವಾಬ್ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

ನಗರದ ಹೊಸಮನೆ ಬೀದಿಯಲ್ಲಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಯಿಂದ ಸಾರ್ವಜನಿಕರ ಸ್ವಾಬ್ ಪರೀಕ್ಷೆ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪರೀಕ್ಷಿಸಿದ ಅವರು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಾ ಮಾತನಾಡಿದರು.

ಸಮುದಾಯದಲ್ಲಿ ಕೋವಿಡ್ ಸೋಂಕು ಹರಡದಂತೆ ಎಚ್ಚರವಹಿಸಲಾಗುತ್ತಿದೆ. ಅದಕ್ಕಾಗಿಯೇ ನಾವುಗಳೇ ಖುದ್ದಾಗಿ ತೆರಳಿ ಪರೀಕ್ಷೆ ನಡೆಸುತ್ತಿದ್ದೇವೆ. ಜನರು ಸಹಕಾರ ನೀಡಬೇಕು. ಯಾವುದೇ ರೀತಿಯ ಅನುಮಾನಗಳಿದ್ದರೂ ಪರಿಹರಿಸಿಕೊಳ್ಳಿ. ಸ್ವಾಬ್ ಪರೀಕ್ಷೆಗೆ ಒಳಪಡುವ ಮೂಲಕ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ವಚ್ಛತೆ ರೂಢಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.