ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿ ಜಲ್ ಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ಗಳನ್ನು ಪ್ರತಿ ತಿಂಗಳಿಗೆ ಒಮ್ಮೆ ಶುಚಿಗೊಳಿಸಬೇಕು. ಶುಚಿಗೊಳಿಸಿರುವ ಬಗ್ಗೆ ಟ್ಯಾಂಕ್ ಮಾಹಿತಿ ಮುದ್ರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ನವೀನ್ ಭಟ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಚಿಕ್ಕಬಳ್ಳಾಪುರ ಮತ್ತು ಮಂಚೇನಹಳ್ಳಿ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಜಲಜೀವನ್ ಮಿಷನ್, ನರೇಗಾ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ವಿವಿಧ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು.

ಹೊಸದಾಗಿ ನಿರ್ಮಿಸುವ ಟ್ಯಾಂಕ್ಗಳ ಕಾಮಗಾರಿ ಗುಣಮಟ್ಟದಿಂದ ಇರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೆ ಒಮ್ಮೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆ ಕರೆಯಬೇಕು. ಗ್ರಾಮದ ನೀರು ಮತ್ತು ನೈರ್ಮಲ್ಯ ಬಗ್ಗೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು ಎಂದು ಸೂಚಿಸಿದರು.

ಆ ಮೂಲಕ ಪ್ರತಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಪ್ರತಿ ಮೂರು ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ನೀರು ಪರೀಕ್ಷೆ ಮಾಡಿಸಬೇಕು. ಕೆಟ್ಟು ಹೋಗಿರುವ ಗೇಟ್ವಾಲ್ಗಳನ್ನು ತಕ್ಷಣವೇ ಬದಲಾಯಿಸಬೇಕು. ಇಲ್ಲವೇ ದುರಸ್ತಿಗೊಳಿಸಬೇಕು ಎಂದು ಸೂಚಿಸಿದರು.

ಪೆರೇಸಂದ್ರದ ಡಿಜಿಟಲ್ ಗ್ರಾಂಥಲಾಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಇಒ, ಅರಿವು ಕೇಂದ್ರದಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು, ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಆಗುವಂತಹ ಪುಸ್ತಕ ಇರಿಸಬೇಕು ಎಂದು ಪಿಡಿಒಗೆ ಸೂಚಿಸಿದರು.

ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ತಾಂಡ್ರಮರದಹಳ್ಳಿ ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ವೀಕ್ಷಿಸಿದರು. ನಂತರ ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡಿ ಸಲಹೆ ನೀಡಿದರು.

ಮಂಚೇನಹಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟನಾಗೇನಹಳ್ಳಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕ (ಎಂ.ಆರ್.ಎಫ್) ಕಾಮಗಾರಿ ವೀಕ್ಷಿಸಿದರು.

ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ಲೋಪದೋಷಗಳಿಲ್ಲದೆ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅ. 2ರ ಗಾಂಧಿ ಜಯಂತಿ ವೇಳೆಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಿ ಚಾಲನೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಕಾಲಕಾಲಕ್ಕೆ ಪ್ರಗತಿ ವರದಿ ನೀಡಬೇಕು ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್, ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹೊನ್ನಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜೆಜೆಎಂ, ನರೇಗಾ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಜಿಲ್ಲಾ ಸಮಾಲೋಚಕರು ಪಾಲ್ಗೊಂಡಿದ್ದರು.

ಕಪ್ಪುಪಟ್ಟಿಗೆ ಗುತ್ತಿಗೆದಾರ

ಪೆರೇಸಂದ್ರ ಗ್ರಾಮದಲ್ಲಿ ಜಲ್ ಜೀವನ್ ಮೀಷನ್ ಯೋಜನೆಯ ಕಾಮಗಾರಿ ವಿಳಂಬವಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ಗೆ ಸಿಇಒ ಆದೇಶಿಸಿದರು.

ಟ್ಯಾಂಕ್ ಹತ್ತಿ ಸ್ವಚ್ಛತೆ ವೀಕ್ಷಿಸಿದ ಸಿಇಒ

ಪೆರೇಸಂದ್ರ ಗ್ರಾಮ ಪಂಚಾಯಿತಿಯ ತಿಪ್ಪಾರೆಡ್ಡಿ ನಾಗೇನಹಳ್ಳಿಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಹತ್ತಿದ ಸಿಇಒ ಟ್ಯಾಂಕ್ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.