ಶನಿವಾರ, ಅಕ್ಟೋಬರ್ 16, 2021
29 °C
2021–22ನೇ ಸಾಲಿನಲ್ಲಿ 22 ಕಾಮಗಾರಿಗಳಿಗೆ ಅನುಮೋದನೆ

ರಸ್ತೆ ಅಭಿವೃದ್ಧಿಗೆ ಹೆಚ್ಚು ಅನುದಾನ

ಎಂ. ರಾಮಕೃಷ್ಣಪ್ಪ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಶಾಸಕ ಎಂ. ಕೃಷ್ಣಾರೆಡ್ಡಿ ಕಳೆದ ಮೂರು ವರ್ಷಗಳಿಂದಲೂ ಪ್ರದೇಶಾಭಿವೃದ್ಧಿ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ, ಮೂಲಸೌಲಭ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಅನುದಾನವನ್ನು ಮೂಲಸೌಲಭ್ಯ ಅಭಿವೃದ್ಧಿಗೆ ಹೆಚ್ಚು ಬಳಸಿದ್ದಾರೆ.

2020-21ನೇ ಸಾಲಿನಲ್ಲಿ ನಾಲ್ಕು ಕಂತುಗಳಲ್ಲಿ 55 ಕಾಮಗಾರಿಗಳಿಗೆ ₹ 2 ಕೋಟಿಯ ಕ್ರಿಯಾಯೋಜನೆಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದರು. ವಿಶೇಷವಾಗಿ ರಸ್ತೆಗಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಸ್ಮಶಾನ, ಅಂಗವಿಕಲರ ವಾಹನಗಳ ವಿತರಣೆಗೆ ಹಣ ಬಳಸಿದ್ದಾರೆ. ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಿಗೆ ವಾಹನಗಳ ಖರೀದಿಗಾಗಿ ತಲಾ ₹ 8 ಲಕ್ಷ ನೀಡಿದ್ದಾರೆ. ಅಂಗವಿಕಲರಿಗೆ ತ್ರಿಚಕ್ರ ವಾಹನಗಳ ಖರೀದಿಗೆ ₹ 2 ಲಕ್ಷ ನೀಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ₹ 1 ಕೋಟಿ ನಿಧಿ ನೀಡಿದೆ. 2021-22ರಲ್ಲಿ ಸಹ ನಾಲ್ಕು ಹಂತಗಳಲ್ಲಿ 60 ಕಾಮಗಾರಿಗಳಿಗೆ ₹ 2 ಕೋಟಿ ವೆಚ್ಚದ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ. ಸರ್ಕಾರ ₹ 1 ಕೋಟಿ ಬಿಡುಗಡೆ ಮಾಡಿದ್ದು 22 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 6 ಕಾಮಗಾರಿಗಳು ಪೂರ್ಣವಾಗಿವೆ. 16 ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ ₹ 94.89 ಲಕ್ಷ ಬಿಡುಗಡೆ ಮಾಡಲಾಗಿದ್ದು, ₹ 5.11 ಲಕ್ಷ ಬಾಕಿ ಇದೆ. ಕೈವಾರ ಮತ್ತು ಸಂತೇಕಲ್ಲಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಹೈಮಾಸ್ಕ್ ದೀಪ ಅಳವಡಿಸಲು ₹ 4.8 ಲಕ್ಷ, ಹಿರೇಪಾಳ್ಯ ಮತ್ತು ಸಂತೇಕಲ್ಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಗಳ ಕೊಠಡಿಗಳ ದುರಸ್ತಿಗೆ ₹ 4.9 ಲಕ್ಷ ಹಾಗೂ ಕೆಲ ದೇವಾಲಯಗಳ ಅಭಿವೃದ್ಧಿಗೂ ಅನುದಾನ ನೀಡಿದ್ದಾರೆ.

ಸ್ಮಶಾನಗಳಲ್ಲಿ ಐಮಾಸ್ಟ್ ದೀಪಗಳ ಅಳವಡಿಕೆ, ಕುಡಿಯುವ ನೀರು, ಪಶುವೈದ್ಯ ಆಸ್ಪತ್ರೆಗಳ ಕಾಂಪೌಂಡ್ ನಿರ್ಮಾಣಕ್ಕೂ ಅನುದಾನ ನೀಡಿದ್ದಾರೆ. ಹೀಗೆ ಜಿಲ್ಲೆಯಲ್ಲಿ ಕ್ಷೇತ್ರಾಭಿವೃದ್ಧಿಯನ್ನು ಉತ್ತಮವಾಗಿ ಬಳಸಿಕೊಂಡಿರುವ ಶಾಸಕರಲ್ಲಿ ಕೃಷ್ಣಾರೆಡ್ಡಿ ಪ್ರಮುಖರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.