ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್‌ನಿಂದ ಹೆಚ್ಚಿನ ಸಾಲದ ಭರವಸೆ

Last Updated 24 ಡಿಸೆಂಬರ್ 2020, 3:22 IST
ಅಕ್ಷರ ಗಾತ್ರ

ಚಿಂತಾಮಣಿ: ಡಿಸಿಸಿ ಬ್ಯಾಂಕಿನಿಂದ ಸಂಘದ ವ್ಯಾಪ್ತಿಯ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಸಂಘದ ಅಧ್ಯಕ್ಷ ಎಂ.ವೆಂಕಟರೆಡ್ಡಿ ಭರವಸೆ ನೀಡಿದರು.

ತಾಲ್ಲೂಕಿನ ಕುರುಬೂರಿನ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಂಘದ 2019-20 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಗೋವಿಂದಗೌಡರುಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾಗಿರುವುದರಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಹಿಂದೆಯೂ ಅವರು ನಮ್ಮ ಸಂಘದ ಅಭಿಮಾನವಿದ್ದು ಸಾಕಷ್ಟು ಸಹಾಯ ಮಾಡಿದ್ದಾರೆ. ರೈತರು ಹಾಗೂ ಸಂಘದ ಅಭಿವೃದ್ಧಿಗಾಗಿ ಇನ್ನೂ ಹೆಚ್ಚಿನ ಸಹಕಾರ ನೀಡಬೇಕು ಎಂದು
ಮನವಿ ಸಲ್ಲಿಸಿದ್ದೇವೆ. ಅವರು ಸಹಕಾರ ನೀಡುವ ಭರವಸೆ ನೀಡಿದ್ದಾರೆ’ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆಯಿಂದ ಇನ್ನೂ ನೂತನ ಆಡಳಿತ ಮಂಡಳಿ ಸಹಕಾರ ಸಂಘದ ಕಡೆ ಗಮನ ಹರಿಸಲು ಸಾಧ್ಯವಾಗಲಿಲ್ಲ. ಕೆಲವು ನ್ಯೂನತೆಗಳು ಆಗಿದ್ದರೂ ಮುಂದೆ ಅವುಗಳನ್ನು ಸರಿಪಡಿಸಿಕೊಳ್ಳಲಾಗುವುದು. ಸಂಘವನ್ನು ರಾಜ್ಯದಲ್ಲೇ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು. ರೈತರು ಮತ್ತು ಸಂಘದ ಸದಸ್ಯರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಸಭೆಯಲ್ಲಿ 2019-20 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ, 2020-21 ನೇ ಸಾಲಿನ ಅಂದಾಜುಬಜೆಟ್ ಮಂಡಿಸಲಾಯಿತು. ಸಂಘದ ಕೆಲವು ಸದಸ್ಯರು ಹಾಗೂ ನಿರ್ದೇಶಕರಿಗೆ ಸಾಮಾನ್ಯ ಸಭೆಯ ನೋಟಿಸ್‌ ತಲುಪಿಲ್ಲ ಎಂದು ಕೆಲವು ರೈತರು ವಿರೋಧ ವ್ಯಕ್ತಪಡಿಸಿದರು.

ಸಂಘದ ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಮೂರ್ತಿ, ನಿರ್ದೇಶಕರಾದ ನೇತಾಜಿಗೌಡ, ಶಿವಾರೆಡ್ಡಿ, ಎಂ.ಶ್ರೀನಿವಾಸಗೌಡ, ವಿಶ್ವನಾಥರೆಡ್ಡಿ, ಮುನಿವೆಂಕಟಪ್ಪ, ಕೆ.ಎಂ.ನಟರಾಜ್, ಗಂಗಮ್ಮ, ಕೃಷ್ಣಪ್ಪ, ಎ.ಜೆ.ಕೃಷ್ಣ,
ಕೆ.ಎಂ.ಚಂದ್ರಕಲಾ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT