ಗೌರಿಬಿದನೂರು: ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಮಗನೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪ್ರತಿನಿತ್ಯ ತಾಯಿ–ಮಗನ ಮಧ್ಯೆ ತಾಯಿಯ ಅಕ್ರಮ ಸಂಬಂಧ ವಿಚಾರವಾಗಿ ಗಲಾಟೆ ನಡೆಯುತ್ತಿದ್ದು ಮಂಗಳವಾರ ರಾತ್ರಿ ಗಲಾಟೆ ವಿಕೋಪಕ್ಕೆ ಹೋಗಿದೆ. ಮಗ ಚಂದ್ರಶೇಖರ (27) ಕುಡಿದ ಅಮಲಿನಲ್ಲಿ ತನ್ನ ತಾಯಿ ರಾಮಾಂಜಿನಮ್ಮ (55) ಅವರನ್ನು ದೊಡ್ಡ ಕಲ್ಲಿನಿಂದ ಎದೆಗೆ ಮತ್ತು ತಲೆಗೆ ಹೊಡೆದ ಪರಿಣಾಮ ರಾಮಾಂಜಿನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರು ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸೆ, ಸರ್ಕಲ್ ಇನ್‌ಸ್ಪೆಕ್ಟರ್ ಸತ್ಯನಾರಾಯಣ್ ಭೇಟಿನೀಡಿ ಪರಿಶೀಲನೆ ನಡೆಸಿದರು. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.