ಗುರುವಾರ , ಮಾರ್ಚ್ 4, 2021
24 °C

ಸ್ಫೋಟ ದುರಂತ: ತನಿಖೆ ನಡೆಸಲು ಸಮಿತಿ ರಚಿಸುವಂತೆ ಸಂಸದ ಬಚ್ಚೇಗೌಡ ಆಗ್ರಹ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಸದ ಬಿ.ಎನ್. ಬಚ್ಚೇಗೌಡ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹಿರೇನಾಗವಲ್ಲಿ ಬಳಿ ನಡೆದ ಸ್ಫೋಟ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಲು ಸರ್ಕಾರ ಸಮಿತಿಯೊಂದನ್ನು ರಚಿಸಬೇಕು ಎಂದು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಆಗ್ರಹಿಸಿದರು. 

‘ಜಿಲ್ಲೆಯಲ್ಲಿ 175 ಕ್ರಷರ್‌ಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 55 ಕ್ರಷರ್‌ಗಳು ಕೆಲಸ ಮಾಡುತ್ತಿವೆ. ಕ್ರಷರ್‌ಗಳನ್ನು ಲೀಜ್‌ಗೆ ಕೊಟ್ಟ ಮೇಲೆ ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತದೆ. ಹಾಗಾಗಿ ಅಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು’ ಎಂದು ಒತ್ತಾಯಿಸಿದರು.   

‘ಚಿಕ್ಕಬಳ್ಳಾಪುರ ತಾಲ್ಲೂಕಿನ ಸುತ್ತಮತ್ತ ಹಲವೆಡೆ ಕಲ್ಲು ಗಣಿಗಾರಿಗೆ ಹೆಚ್ಚಾಗಿ ನಡೆಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ತಿಳಿಸಿದರು. 

ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಯಿ ಭೇಟಿ ನೀಡಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಈಗಾಗಲೇ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಆದರೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಹೆಚ್ಚುವರಿ ₹5 ಲಕ್ಷ ಪರಿಹಾರ ನೀಡುವಂತೆ ಸಚಿವ ಮುರುಗೇಶ್‌ ನಿರಾಣಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು