ಚಿಕ್ಕಬಳ್ಳಾಪುರ: ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಎಸ್ಟಿಪಿಗಳ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಲು ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪಾದಯಾತ್ರೆ ನಡೆಸಿ ಹೋರಾಟ ಮಾಡುತ್ತೇವೆ ಎಂದು ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರ ಭಾಗಕ್ಕೆ 2 ಹಂತಗಳಲ್ಲಿ ನೀರು ಸಂಸ್ಕರಣೆಯಾಗಿ ಬರುತ್ತಿದೆ. ಆದರೆ, ಇತ್ತೀಚೆಗೆ ಈ ನೀರು ಸರಿಯಾಗಿ ಸಂಸ್ಕರಣೆಯಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಸಿಂಗಪುರದಲ್ಲಿ ಕೊಳಚೆ ನೀರನ್ನು ಕುಡಿಯುವ ಮಟ್ಟಕ್ಕೆ ಶುದ್ಧೀಕರಣ ಮಾಡಲಾಗುತ್ತದೆ. ತೃತೀಯ ಹಂತದ ಸಂಸ್ಕರಣೆ ನಂತರ ಇನ್ನಷ್ಟು ಫಿಲ್ಟರ್ ಮಾಡಿ ಕುಡಿಯುವ ನೀರಿಗೆ ಬಳಸಲಾಗುತ್ತಿದೆ ಎಂದರು.

ಆ ನೀರು ಹರಿಯುವ ನದಿಯಷ್ಟು ಶುದ್ಧವಾಗಿದೆ. ನಮೀಬಿಯಾದಲ್ಲೂ ಇದೇ ರೀತಿ ಬಳಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇನ್ನಷ್ಟು ಶುದ್ಧ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಆ ಬದ್ಧತೆ ಮತ್ತು ಜವಾಬ್ದಾರಿಯನ್ನು ಸರ್ಕಾರ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

‘ಈ ಸಂಬಂಧ ಬಿಜೆಪಿ ಹೋರಾಟ ರೂಪಿಸಲಿದೆ. ಆದರೆ, ಇದಕ್ಕಾಗಿ ಬಂದ್ ಮಾಡುವುದು ಸಮಂಜಸ ಅಥವಾ ಪರಿಹಾರವಾಗುವುದಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಬೀದಿಬದಿ ವ್ಯಾಪಾರಿಗಳು ಕೆಲಸ ಮಾಡುತ್ತಿದ್ದಾರೆ. ಬಂದ್ ಮಾಡಿದರೆ ಇವರೆಲ್ಲರಿಗೂ ಸಮಸ್ಯೆ ಹೆಚ್ಚಾಗುತ್ತದೆ. ಜನರಿಗೆ ಕಷ್ಟ ಕೊಡದೆ, ಯಾರಿಗೂ ನಷ್ಟ ಉಂಟುಮಾಡದೆ ಹೋರಾಟ ಮಾಡಬೇಕು. ಬಂದ್ ಮಾಡಲು ಬಿಜೆಪಿ ಅಥವಾ ನಾನು ಬೆಂಬಲ ಕೊಡುವುದಿಲ್ಲ’ ಎಂದು ಹೇಳಿದರು.

‘ಬಯಲುಸೀಮೆಯ ಮೂರು ಜಿಲ್ಲೆಗಳಲ್ಲಿ ನಾನು ಪಾದಯಾತ್ರೆ ಮಾಡಿ ಹಳ್ಳಿಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಕೆಲಸ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರೊಂದಿಗೆ ಹೋರಾಟ ಮಾಡುತ್ತೇನೆ’ ಎಂದರು.

ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ: ರಾಜ್ಯ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಗೆ ಯಾವುದೇ ಕ್ರಮ ವಹಿಸದೆ ಕೇಂದ್ರ ಸರ್ಕಾರವನ್ನು ದೂಷಿಸುವ ಕೆಲಸದಲ್ಲಿ ಮಗ್ನವಾಗಿದೆ. ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೆ ಕ್ಷೇತ್ರಕ್ಕೆ ಹತ್ತು ಪಟ್ಟು ಅನುದಾನ ನೀಡಿದೆ. ಹೆಣ್ಣುಮಕ್ಕಳ ಸರ್ವಿಕಲ್ ಕ್ಯಾನರ್ ಲಸಿಕೆಗೆ ಸುಮಾರು ₹6,000 ವೆಚ್ಚವಾಗುತ್ತದೆ. ಆ ಲಸಿಕೆಯನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಹೆಚ್ಚು ಅನುದಾನ ಮತ್ತು ಜಿಎಸ್ಟಿ ಪರಿಹಾರದ ಮೊತ್ತವನ್ನು ಹಂಚಿಕೆ ಮಾಡಿದೆ. ಆದಾಗ್ಯೂ, ತಮ್ಮ ರಾಜಕೀಯ ಹುಚ್ಚಿಗಾಗಿ ಅಭಿವೃದ್ಧಿಯನ್ನು ಹಾಳು ಮಾಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯಾವುದೇ ಸರ್ಕಾರಗಳು ಈ ಭಾಗದ ಜನರಿಗೆ ಶಾಶ್ವತ ನೀರಾವರಿ ನೀಡುವ ಕೆಲಸ ಮಾಡಲಿಲ್ಲ. 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್.ಎನ್ ಮತ್ತು ಕೆ.ಸಿ ವ್ಯಾಲಿ ಜಾರಿ ಮೂಲಕ ಈ ಭಾಗಕ್ಕೆ ನೀರು ಹರಿಸುವ ಕೆಲಸಕ್ಕೆ ಸಹಕಾರ ನೀಡಿದರು. ಇದರ ಫಲವಾಗಿ ಇಂದು 60 ಕೆರೆಗಳು ಭರ್ತಿಯಾಗಿದ್ದು, ಈ ಹಿಂದೆ ಒಂದು ಸಾವಿರ ಅಡಿ ಬೊರ್ವೆಲ್ ಕೊರದರೂ, ನೀರು ಸಿಗದ ಪ್ರದೇಶದಲ್ಲಿ 200–300 ಅಡಿಗೆ ಅಂತರ್ಜಲ ದೊರೆಯುತ್ತಿದೆ. ಆಗ ಕೇವಲ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಮಾತ್ರವಿತ್ತು. ಈ ನೀರು ಕುಡಿಯಲು ಯೋಗ್ಯವಲ್ಲ ಎಂಬುದು ಎಲ್ಲರಿಗೂ ಗೊತ್ತಿತ್ತು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.