ಚಿಕ್ಕಬಳ್ಳಾಪುರ: ಬಿಜೆಪಿ ಮತ್ತು ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆಸಿವೆ. ಮುಡಾ ನಿವೇಶನ ಹಂಚಿಕೆ ಪ್ರಕರಣದ ನೆಪದಲ್ಲಿ ತೇಜೋವಧೆಗೆ ಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ಹಿಂದುಳಿದ ಜಾತಿಗಳ ಒಕ್ಕೂಟದ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟಿಸಿದರು.

ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ, ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಿಲ್ಲಬೇಕು ಎಂದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಕೋಮುವಾದಿಗಳು ಅಧಿಕಾರದ ಆಸೆಗಾಗಿ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. 15 ಬಾರಿ ಬಜೆಟ್ ಮಂಡಿಸಿದ 40 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಜನಾನುರಾಗಿ ನಾಯಕರು ಎಂದರು.

ಹಲವು ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ ಅವರು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ. ಅವರ ವರ್ಚಸ್ಸಿಗೆ ಮಸಿ ಬಳಿದು ರಾಜಕೀಯವಾಗಿ ಮುಗಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಡಾ ಮತ್ತು ಮಹರ್ಷಿ ವಾಲ್ಮೀಕಿ ನಿಗಮದ ವಿವಾದದಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ತಳಕು ಹಾಕಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಅವರೇ ತನಿಖಾ ಆಯೋಗ ರಚಿಸಿದ್ದರೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು, ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸುವ ಕುತಂತ್ರಗಳು ನಡೆಯುತ್ತಲೇ ಇದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಯನ್ನು ಇಲ್ಲಿಗೆ ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯ ವ್ಯಾಪಿ ಪ್ರತಿಭಟನೆ ಮತ್ತು ರಾಜಭನನ ಚಲೋ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಮುಖಂಡರಾದ ಯಲುವಹಳ್ಳಿ ಎನ್. ರಮೇಶ್, ಜಿ.ಪಂ ಮಾಜಿ ಸದಸ್ಯರಾದ ಪ್ರಕಾಶ್, ರಾಜಾಕಾಂತ್, ಕೆ.ಎಂ.ಮುನೇಗೌಡ, ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ತೋಪಡ ನಾಗರಾಜ್, ಜಯರಾಮ್, ಸುರೇಶ್, ಜಗದೀಶ್, ರಾಜೇಶ್, ಸು.ಧಾ.ವೆಂಕಟೇಶ್, ಕೃಷ್ಣಪ್ಪ, ಕುಬೇರ ಅಚ್ಚು, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಯಾಸ್ಮಿನ್ ತಾಜ್, ಮಮತಾಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.