ಮಂಗಳವಾರ, ಆಗಸ್ಟ್ 3, 2021
21 °C
ಎರಡು ವರ್ಷಗಳಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ನೇಮಕ

ಚಿಕ್ಕಬಳ್ಳಾಪುರ: ಜೆಡಿಎಸ್‌ ಜಿಲ್ಲಾ ಘಟಕಕ್ಕೆ ಮುನೇಗೌಡ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಎರಡು ವರ್ಷಗಳಿಂದ ಖಾಲಿ ಇದ್ದ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಂ.ಮುನೇಗೌಡ ಅವರನ್ನು ನೇಮಕ ಮಾಡಲಾಗಿದೆ. 

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಬೆಂಗಳೂರಿನಲ್ಲಿ ಮುನೇಗೌಡ ಅವರಿಗೆ ನೇಮಕಾತಿ ಆದೇಶ ಪತ್ರ ನೀಡುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಿದರು.

ಈ ವೇಳೆ ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್, ಮುಖಂಡ ಮೇಲೂರು ರವಿಕುಮಾರ್ ಹಾಜರಿದ್ದರು.

ಈ ಹಿಂದೆ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಕೆ.ವಿ.ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. ಅಂದಿನಿಂದ ಸುಮಾರು ಎರಡು ವರ್ಷಗಳ ಕಾಲ ಅಧ್ಯಕ್ಷ ಹುದ್ದೆ ಖಾಲಿಯಾಗಿತ್ತು.

ಇದೀಗ ನಂದಿ ಕ್ಷೇತ್ರದ ಸದಸ್ಯ ಮುನೇಗೌಡ ಅವರಿಗೆ ಜಿಲ್ಲೆಯಲ್ಲಿ ಪಕ್ಷ ಮುನ್ನಡೆಸುವ ಹೊಣೆಗಾರಿಕೆ ವಹಿಸಿರುವುದು ಪಕ್ಷಾಂತರದಿಂದ ನಲುಗಿ, ನಿಸ್ತೇಜಗೊಂಡಿದ್ದ ಪಕ್ಷದೊಳಗೆ ಸಂಚಲನ ಮೂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು