ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಮೂರು ನಾಮಪತ್ರಗಳ ಸಲ್ಲಿಕೆ

Last Updated 23 ಜನವರಿ 2020, 16:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಗುರುವಾರ ಮೂರು ನಾಮಪತ್ರ ಸಲ್ಲಿಕೆಯಾದವು. ಈವರೆಗೆ ನಗರದ 31 ವಾರ್ಡ್‌ಗಳ ಪೈಕಿ ನಾಲ್ಕು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ.

ಗುರುವಾರ 17ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ್, 26ನೇ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ವಂದನಾ ಹಾಗೂ 30ನೇ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೀನಾಕ್ಷಿ ಅವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಜ.28 ಕೊನೆಯ ದಿನವಾಗಿದ್ದು, ಜ.29 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಜ.31 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಫೆ.9 ರಂದು ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅಗತ್ಯ ಬಿದ್ದರೆ ಫೆ.10 ರಂದು ನಡೆಸಬೇಕಾಗುತ್ತದೆ. ಫೆ.11 ರಂದು ತಾಲ್ಲೂಕು ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ನಾಮಪತ್ರ ಸ್ವೀಕಾರಕ್ಕೆ ವಾರ್ಡ್‌ವಾರು ವಿಂಗಡನೆ ಮಾಡಿ ನಾಲ್ಕು ಚುನಾವಣೆ ಅಧಿಕಾರಿಗಳನ್ನು ನಿಯೋಜಿಸಿ, ನಗರದಲ್ಲಿ ಪ್ರತ್ಯೇಕ ಕಾರ್ಯಾಲಯಗಳನ್ನು ತೆರೆಯಲಾಗಿದೆ. ಆಯಾ ವಾರ್ಡ್ ಉಮೇದುವಾರರು ಸಂಬಂಧಪಟ್ಟ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ರಜಾ ದಿನ ಹೊರತುಪಡಿಸಿ, ಉಳಿದಂತೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಬಹುದು.

1 ರಿಂದ 8 ವಾರ್ಡ್ ಉಮೇದುವಾರರು ನಗರದ ಹಳೆಯ ಜಿಲ್ಲಾ ಆಸ್ಪತ್ರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಅವರ ಕಚೇರಿಯಲ್ಲಿ ತೆರೆದ ಚುನಾವಣಾಧಿಕಾರಿ (ಕುಮಾರಸ್ವಾಮಿ– 9448999242) ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬೇಕು.

9 ರಿಂದ 16ನೇ ವಾರ್ಡ್‌ಗಳ ವ್ಯಾಪ್ತಿಯ ಉಮೇದುವಾರರು ನಗರದ ಎಂ.ಜಿ.ರಸ್ತೆಯಲ್ಲಿರುವ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಜಿಲ್ಲಾ ಪಂಚಾಯತ್ ರಾಜ್ ತಾಂತ್ರಿಕ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅವರ ಕಚೇರಿಯಲ್ಲಿ ತೆರೆದ ಚುನಾವಣಾಧಿಕಾರಿ (ವಿ.ಶ್ರೀನಿವಾಸರೆಡ್ಡಿ –9880307224) ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬೇಕು.

17 ರಿಂದ 24ರ ವಾರ್ಡ್‌ಗಳ ಉಮೇದುವಾರರು ನಗರಸಭೆ ಕಚೇರಿಯಲ್ಲಿ ತೆರೆದ ಚುನಾವಣಾಧಿಕಾರಿ (ಹರ್ಷವರ್ಧನ್– 9480859105) ಕಾರ್ಯಾಲಯದಲ್ಲಿ ಮತ್ತು 25 ರಿಂದ 31ರ ವಾರ್ಡ್‌ಗಳ ವ್ಯಾಪ್ತಿಯ ಉಮೇದುವಾರರು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ತೆರೆದ ಚುನಾವಣಾಧಿಕಾರಿ (ಶಿವಕುಮಾರ್– 9448143687) ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT