ಚಿಂತಾಮಣಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೊಲೆ ಪ್ರಕರಣದ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ. ಡಿವೈಎಸ್ಪಿ ಪಿ.ಮುರಳೀಧರ್ ಹಾಗೂ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು
ಪೂರ್ವ ನಿಯೋಜಿತ ಕೊಲೆ
ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಮಾಂಜಿಯಿಂದ ₹10–15 ಲಕ್ಷ ಹಣ ಪಡೆದಿರುವ ಶಂಕೆ ಇದೆ. ಹಣ ವಾಪಸ್ ಕೇಳಿರುವುದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಾಮಿಕ ತನಿಖೆಯಿಂದ ಗೊತ್ತಾಗಿದೆ. ರಾಮಾಂಜಿಯನ್ನು ಆರೋಪಿಗಳು ಕರೆದುಕೊಂಡು ಹೋಗುವ ಕಾರಿನಲ್ಲಿ ಹಗ್ಗ ಹಾಗೂ ಕೊಲೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರು. ಇದು ಪೂರ್ವ ನಿಯೋಜಿತವಾಗಿ ಕೊಲೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು. ತನಿಖೆ ಪೂರ್ಣಗೊಂಡ ಇನ್ನಷ್ಟು ಖಚಿತ ಮಾಹಿತಿ ದೊರೆಯಲಿದೆ ಎಂದರು.