ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯ ಮೇಲೆ ಜಿಲ್ಲೆಯ ಜನರ ನಿರೀಕ್ಷೆ ಅಪಾರವಾಗಿದೆ. ಜಿಲ್ಲೆಗೆ ಯಾವ ಯೋಜನೆಗಳು ದೊರೆಯುತ್ತವೆ? ಈ ಹಿಂದೆ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳೇ ಮತ್ತೆ ಪ್ರಸ್ತಾಪ ಆಗುತ್ತದೆಯೇ? ಅಥವಾ ಈಗಾಗಲೇ ಜಿಲ್ಲೆಯಲ್ಲಿ ನಡೆದಿರುವ ಯೋಜನೆಗಳು, ಕಾಮಗಾರಿಗಳಿಗೆ ಮತ್ತಷ್ಟು ಹಣ ದೊರೆಯುತ್ತದೆಯೇ? ಕನಿಷ್ಠ ಮಟ್ಟದಲ್ಲಿಯಾದರೂ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಘೋಷಿಸುವರೇ– ಎನ್ನುವ ಅಪಾರವಾದ ನಿರೀಕ್ಷೆಗಳು ಜಿಲ್ಲೆಯ ಜನರಲ್ಲಿ ಗರಿಗೆದರಿವೆ.

ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ 10ಕ್ಕೂ ಹೆಚ್ಚು ಪ್ರಸ್ತಾವಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ವಿಶೇಷವಾಗಿ ಕಾರ್ಮಿಕರ ವಸತಿ ಶಾಲೆ ಆರಂಭಿಸಬೇಕು, ಬಾಗೇಪಲ್ಲಿ ಹೆಸರನ್ನು ಭಾಗ್ಯ ನಗರ ಎಂದು ಬದಲಿಸಬೇಕು, ಗಂಟ್ಲಮ್ಮ ಅಣೆಕಟ್ಟೆ ನಿರ್ಮಾಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದಾರೆ. ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸಹ ತಮ್ಮ ಕ್ಷೇತ್ರಕ್ಕೆ ಇಂತಹ ಯೋಜನೆಗಳು ಜಾರಿಯಾಗಬೇಕು ಎಂದು ಕೋರಿದ್ದಾರೆ.

ಎಚ್.ಎನ್.ವ್ಯಾಲಿ ಮತ್ತು ಕೆ.ಸಿ ವ್ಯಾಲಿ ಯೋಜನೆಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಇತ್ತೀಚೆಗೆ ತಿಳಿಸಿದ್ದರು. ಇಲ್ಲಿಯವರೆಗೆ ಎಚ್.ಎನ್.ವ್ಯಾಲಿ ನೀರು ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿಗೆ ಹರಿದಿಲ್ಲ. ಈಗ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯಕೈಗೊಳ್ಳುವ ಸಾಧ್ಯತೆಯೂ ಇದೆ.

ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡುವ ವಿಚಾರವಾಗಿ ಚರ್ಚೆಗಳು ನಡೆಯದ ಕಾರಣ ಜೂ.19ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಲಾಯಿತು. ಜು.2ಕ್ಕೆ ಮತ್ತೆ ಸಭೆ ನಿಗದಿಗೊಳಿಸಲಾಯಿತು.

ನಂದಿಗಿರಿಧಾಮದಲ್ಲಿ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದೆ. ಈ ಕಾರಣಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಗಿರಿಧಾಮದ ಇತಿಹಾಸದಲ್ಲಿ ದಾಖಲಾಗುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಯೋಜನೆಗಳು ದೊರೆಯುತ್ತವೆ ಎನ್ನುವ ಅಪಾರವಾದ ನಿರೀಕ್ಷೆಗಳನ್ನು ಜನರು ಹೊಂದಿದ್ದಾರೆ.

ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿರುವ ಜಿಲ್ಲೆಯ ಈ ಯೋಜನೆಗಳಿಗೆ ದೊರೆಯುವುದೇ ಅನುಮೋದನೆ?

* ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಎಂಆರ್ಐ ಯಂತ್ರ ಖರೀದಿಗೆ ಆಡಳಿತಾತ್ಮಕ ಅನುಮೋದನೆ

* ಚೇಳೂರು ಪ್ರಾಥಮಿಕ ಆರೋಗ್ಯ ಕೇಂದ್ರವು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ.

* ಶಿಡ್ಲಘಟ್ಟ ತಾಲ್ಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ₹ 123.50 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ

* ಚಿಂತಾಮಣಿ ತಾಲ್ಲೂಕಿನ ಭಕ್ತರಹಳ್ಳಿ–ಅರಸೀಕೆರೆಯ ಕೆಳಭಾಗದ ಹೊಸ ಕೆರೆ ನಿರ್ಮಾಣ ಕಾಮಗಾರಿಯನ್ನು ₹ 36 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

* ಎಚ್.ಎನ್.ವ್ಯಾಲಿ ನೀರನ್ನು ಶಿಡ್ಲಘಟ್ಟ ತಾಲ್ಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲ್ಲೂಕಿನ 119 ಕೆರೆಗಳಿಗೆ ಒಟ್ಟು 164 ಕೆರೆಗಳಿಗೆ ನೀರು ತುಂಬಿಸುವ ₹ 237.10 ಕೋಟಿ ಅಂದಾಜು ಮೊತ್ತದ ಆಡಳಿತಾತ್ಮಕ ಅನುಮೋದನೆ

* ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯ ನಗರ ಎಂದು ಮರು ನಾಮಕರಣ

ಕನಸಾಗಿಯೇ ಉಳಿಯಲಿದೆಯೇ ಸಂಸ್ಕರಣೆ?

ಎಚ್.ಎನ್.ವ್ಯಾಲಿ ಮತ್ತು ಕೆ.ಸಿ ವ್ಯಾಲಿ ಯೋಜನೆಯಡಿ ಎರಡು ಹಂತದಲ್ಲಿ ಸಂಸ್ಕರಿಸಿದ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತದಲ್ಲಿ ಸಂಸ್ಕರಿಸಿ ಹರಿಸಬೇಕು ಎಂದು ಶಾಶ್ವತ ನೀರಾವರಿ ಹೋರಾಟಗಾರರು ರೈತ ಮುಖಂಡರು ವಿವಿಧ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಎರಡು ಹಂತದಲ್ಲಿಯೇ ಸಂಸ್ಕರಣೆ ಸಾಧ್ಯ. ಮೂರು ಹಂತದ ಸಂಸ್ಕರಣೆ ವೆಚ್ಚದಾಯ ಎಂದೇ ಪ್ರತಿಪಾದಿಸುತ್ತಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿಗೆ ಈ ಬಗ್ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಮನವಿ ಸಲ್ಲಿಸಿದೆ. ಸಚಿವ ಸಂಪುಟದ ಕಾರ್ಯಸೂಚಿ ಪಟ್ಟಿಯಲ್ಲಿ ಮೂರು ಹಂತದ ಸಂಸ್ಕರಣೆಯ ವಿಚಾರ ಸೇರಿಸುವಂತೆ ಮನವಿ ಮಾಡಿದೆ. ಆದರೆ ಮೂಲಗಳ ಪ್ರಕಾರ ಈ ಸಂಸ್ಕರಣೆಯ ವಿಚಾರವಾಗಿ ಸಚಿವ ಸಂಪುಟದ ಸಭೆಯಲ್ಲಿ ಯಾವುದೇ ಪ್ರಸ್ತಾಪಗಳು ನಡೆಯುವ ಸಾಧ್ಯತೆ ಇಲ್ಲ. ಮೂರು ಹಂತದ ಶುದ್ಧೀಕರಣ ಕನಸಾಗಿಯೇ ಉಳಿಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.