ಮಂಗಳವಾರ, ಜನವರಿ 18, 2022
23 °C

ನಾಳೆಯಿಂದ ನಂದಿ ಬೆಟ್ಟ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಪ್ರಸಿದ್ಧ ನಂದಿಗಿರಿಧಾಮ (ನಂದಿ ಬೆಟ್ಟ) ಪ್ರವೇಶಕ್ಕೆ ಡಿ.1ರಿಂದ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.

ಶನಿವಾರ ಮತ್ತು ಭಾನುವಾರ ಗಿರಿಧಾಮದಲ್ಲಿ ಕೊಠಡಿಗಳನ್ನು ಕಾಯ್ದಿರಿಸಿದ ಪ್ರವಾಸಿಗರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಸಾಮಾನ್ಯ ಪ್ರವಾಸಿಗರಿಗೆ ಪ್ರವೇಶವಿಲ್ಲ. 

  ಆ.24ರ ರಾತ್ರಿ ಸುರಿದ ಭಾರಿ ಮಳೆಗೆ ಗಿರಿಧಾಮದಲ್ಲಿ ಭೂ ಕುಸಿತ ಉಂಟಾಗಿತ್ತು. ಅಂದಿನಿಂದ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಗಿರಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ನಾಟಕ ಪ್ರವಾಸೋದ್ಯಮ ನಿಗಮದ ಬಹುಪಾಲು  ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಬೇರೆಡೆ ನಿಯೋಜಿಸಲಾಗಿತ್ತು.

ಭೂಕುಸಿತ ಸಂಭವಿಸಿದ ಕಡೆ ರಸ್ತೆ ನಿರ್ಮಾಣಕ್ಕೆ ಸರ್ಕಾರ ₹ 80 ಲಕ್ಷ ಬಿಡುಗಡೆ ಮಾಡಿತ್ತು. ನವೆಂಬರ್ ಮೊದಲ ವಾರದಲ್ಲಿ  ನಂದಿ ಪ್ರವೇಶಕ್ಕೆ ಅವಕಾಶ ದೊರೆಯುವ ಸಾಧ್ಯತೆ ಇತ್ತು. ಆದರೆ ರಸ್ತೆಯ ತಡೆಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಕರಣೆಗಳ ಚೆನ್ನೈ ನಿಂತ ಬರಬೇಕಾಗಿತ್ತು. ತಮಿಳುನಾಡಿನಲ್ಲಿ  ಮಳೆ ಹಿನ್ನೆಲೆಯಲ್ಲಿ ಸಲಕರಣೆಗಳು ಬರುವುದು ತಡವಾಯಿತು‌.

ಕಳೆದ ಮೂರು ತಿಂಗಳಿನಿಂದ ಪ್ರವಾಸಿಗರಿಲ್ಲದ ಕಾರಣ ನಂದಿಗಿರಿಧಾಮ ಹಾಗೂ ಸುತ್ತಲಿನ ಹೋಟೆಲ್‌ಗಳು ಬಂದ್ ಆಗಿದ್ದವು. ಚಟುವಟಿಕೆಗಳು ಸ್ಥಗಿತವಾಗಿದ್ದು  ಗಿರಿಧಾಮ ಪ್ರದೇಶದಲ್ಲಿ ಪೊಲೀಸ್ ಪಹರೆ ಹಾಕಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು