ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ವಿಚಾರವಾಗಿ ಈ ಹಿಂದಿನಿಂದ ಸರ್ಕಾರ ಯಾವುದೇ ಕ್ರಮವಹಿಸಿರಲಿಲ್ಲ. ರೋಪ್ ವೇ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನಮ್ಮ ಸರ್ಕಾರ ಪರಿಹರಿಸಿದೆ. ಒಂದೂವರೆ ವರ್ಷದೊಳಗೆ ರೋಪ್ ವೇ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ ನೀಡಿದರು.

ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಂದಿ ಕ್ರಾಸ್ನಲ್ಲಿ ನೂತನ ಹೂವಿನ ಮಾರುಕಟ್ಟೆ ನಿರ್ಮಾಣಕ್ಕಾಗಿ 20 ಎಕರೆ ಜಮೀನು ಮಂಜೂರಾಗಿದೆ. ಈ ಜಮೀನಿನಲ್ಲಿ ₹140 ಕೋಟಿ ಅಂದಾಜು ವೆಚ್ಚದಲ್ಲಿ ನೂತನ ಹೂವಿನ ಮಾರುಕಟ್ಟೆ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ಧಪಡಿಸಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.