ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಗಿರಿಧಾಮಕ್ಕೆ ಪ್ರವೇಶ: ಸಮಯ ಪರಿಷ್ಕರಣೆ

Last Updated 21 ಏಪ್ರಿಲ್ 2023, 6:40 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ತಿಳಿಸಿದ್ದಾರೆ.

ಈ ಹಿಂದೆ ಬೆಳಿಗ್ಗೆ 5.30 ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದೆ ಎಂದರು.

ಈ ವಿಸ್ತರಣೆ ಸೆ.30ರವರೆಗೆ ಅನ್ವಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT