ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಬೆಟ್ಟ: 300 ಕಾರುಗಳಿಗಷ್ಟೇ ಪಾರ್ಕಿಂಗ್ ಸ್ಥಳ, ರಸ್ತೆಯಲ್ಲೇ ಸಿಲುಕಿದ ವಾಹನಗಳು

ಭಾನುವಾರ ಹೆಚ್ಚಿದ ಸಂಚಾರ ದಟ್ಟಣೆ
Last Updated 12 ಜೂನ್ 2022, 5:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಸಂಚಾರ ದಟ್ಟಣೆ ಉಂಟಾಗಿದೆ. ಗಿರಿಧಾಮದ ವಾಹನ ನಿಲುಗಡೆ ಸ್ಥಳದಲ್ಲಿ 300 ಕಾರುಗಳ ನಿಲುಗಡೆಗೆ ಮಾತ್ರ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ. ಆದರೆ ಶನಿವಾರ ಮತ್ತು ಭಾನುವಾರ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವರು.

ಬೆಟ್ಟಕ್ಕೆ ಹೋದ ಕಾರುಗಳು ವಾಪಸ್ ಆದ ನಂತರವೇ ಕೆಳಗೆ ಇರುವ ಕಾರುಗಳು ಗಿರಿಧಾಮಕ್ಕೆ ಹೋಗಲು ಅವಕಾಶ ನೀಡಲಾಗುತ್ತದೆ.

ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚುವ ಕಾರಣ ಬೆಳಿಗ್ಗೆಯೇ ಪಾರ್ಕಿಂಗ್ ಸ್ಥಳ ವಾಹನಗಳಿಂದ ತುಂಬುತ್ತದೆ. ಆ ನಂತರ ಬರುವ ಪ್ರವಾಸಿಗರಿಗೆ ಪ್ರವೇಶ ದೊರೆಯುವುದು ದುಸ್ತರ. ಪ್ರತಿ ಶನಿವಾರ ಮತ್ತು ಭಾನುವಾರ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಲ್ಲುತ್ತವೆ.

ಭಾನುವಾರ ಕಾರಹಳ್ಳಿ ಕ್ರಾಸ್‌ನಿಂದಲೇ ವಾಹನ ದಟ್ಟಣೆ ಉಂಟಾಗಿದೆ. ನಂದಿಗಿರಿಧಾಮದ ಪ್ರವೇಶ ದ್ವಾರದಲ್ಲಿ ಈ ದಟ್ಟಣೆ ಮತ್ತಷ್ಟು ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT