ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಬೆಟ್ಟ ಇಂದಿನಿಂದ ಸಾರ್ವಜನಿಕರಿಗೆ ಮುಕ್ತ

ಮೂರು ತಿಂಗಳ ನಂತರ ಪ್ರವಾಸಿಗರಿಗೆ ಪ್ರವೇಶ
Last Updated 30 ನವೆಂಬರ್ 2021, 20:29 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಪ್ರಸಿದ್ಧ ಗಿರಿಧಾಮ ನಂದಿಬೆಟ್ಟ ಮೂರು ತಿಂಗಳ ನಂತರಡಿಸೆಂಬರ್‌ 1ರಿಂದ ಮತ್ತೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.

ಶನಿವಾರ ಮತ್ತು ಭಾನುವಾರ ಗಿರಿಧಾಮದಲ್ಲಿ ಕೊಠಡಿಗಳನ್ನು ಕಾಯ್ದಿರಿಸಿದ ಪ್ರವಾಸಿಗರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ.
ಸಾಮಾನ್ಯ ಪ್ರವಾಸಿಗರಿಗೆ ಪ್ರವೇಶವಿಲ್ಲ. ಗಿರಿಧಾಮಕ್ಕೆ ಬರುವವರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಆಗಸ್ಟ್‌ 24ರಂದು ಸುರಿದ ಭಾರಿ ಮಳೆಯಿಂದ ಸಂಭವಿಸಿದಭೂ ಕುಸಿತದಿಂದಾಗಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.ದಿಬ್ಬ ಕುಸಿದ ಕಡೆ ಹೊಸದಾಗಿ ರಸ್ತೆ ನಿರ್ಮಿಸಲಾಗಿದೆ.

ಗಿರಿಧಾಮ ಪ್ರವೇಶಕ್ಕೆ ಪಾಸ್‌ ಕಡ್ಡಾಯ. ಪಾಸ್‌ ವಿತರಿಸಲು ಆನ್‌ಲೈನ್ ಮತ್ತು ಆಫ್‌ಲೈನ್ ವ್ಯವಸ್ಥೆ ಮಾಡಲಾಗಿದೆ.

ಗಿರಿಧಾಮದ ವಾಹನ ನಿಲುಗಡೆ ಪ್ರದೇಶದ ಸ್ಥಳಾವಕಾಶಕ್ಕೆ ಅನುಗುಣವಾಗಿ 1,500 ದ್ವಿಚಕ್ರ ವಾಹನ ಮತ್ತು350 ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಮುಖ್ಯ ಪ್ರವೇಶದ್ವಾರದಲ್ಲಿಯೇ ತಪಾಸಣೆ ನಡೆಸಿ ಪಾಸ್ ಹೊಂದಿರುವ ವಾಹನಗಳನ್ನು ಮಾತ್ರ ಮೇಲ್ಭಾಗಕ್ಕೆ ಬಿಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT