ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿ ಬೆಟ್ಟ: ಭಾನುವಾರ ಸಾವಿರಾರು ಮಂದಿ ಭೇಟಿ ಕಾರಣ ವಾರಂತ್ಯಕ್ಕೆ ನಿಷೇಧ ಹೇರಿಕೆ

Last Updated 13 ಜುಲೈ 2021, 3:45 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪ್ರಸಿದ್ಧ ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಶುಕ್ರವಾರ ಸಂಜೆ ಆರು ಗಂಟೆಯಿಂದ ಸೋಮವಾರ ಬೆಳಿಗ್ಗೆ ಆರರವರೆಗೆ ಈ ನಿಷೇಧ ಜಾರಿಯಲ್ಲಿ ಇರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟಬೇಕಾಗಿದೆ. ಸೋಂಕು ಹೆಚ್ಚದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಆದ್ದರಿಂದ ಮುಂದಿನ ಆದೇಶದವರೆಗೂ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಲಾಕ್‌ಡೌನ್ ತೆರವಾದ ನಂತರ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿತ್ತು. ಆರಂಭದಲ್ಲಿ ಹೆಚ್ಚು ಜನಸಂದಣಿ ಇರಲಿಲ್ಲ. ಆದರೆ ಭಾನುವಾರ (ಜು.11)ರಂದು ಸಾವಿರಾರು ಪ್ರವಾಸಿಗರು ನಂದಿ ಬೆಟ್ಟಕ್ಕೆ ಭೇಟಿ‌ ನೀಡಿದ್ದರು.ವಾರಾಂತ್ಯದಲ್ಲಿ ಬೆಟ್ಟದಲ್ಲಿರುವ ಪ್ರವಾಸೋದ್ಯಮ ನಿಗಮದ ಎಲ್ಲ ಕೊಠಡಿಗಳು ಪ್ರವಾಸಿಗರಿಂದ ಭರ್ತಿ ಆಗಿದ್ದವು.

ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಸಾಗುವ ದೇವನಹಳ್ಳಿ ತಾಲ್ಲೂಕಿನ ರಾಣಿಕ್ರಾಸ್‌ನಲ್ಲಿ ಒಂದು ಕಿಲೋಮೀಟರ್‌ನಷ್ಟು ಸಂಚಾರ ದಟ್ಟಣೆ ಉಂಟಾಗಿತ್ತು. ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದ ಪ್ರವಾಸಿಗರಿಗೆ ದಂಡ ವಿಧಿಸಲಾಗಿತ್ತು. ಈ ಎಲ್ಲ ದೃಷ್ಟಿಯಿಂದ ಜಿಲ್ಲಾಡಳಿತ ವಾರಾಂತ್ಯದ ಪ್ರವೇಶ ನಿಷೇಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT