ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗ್ರಾಮದ ಇತಿಹಾಸ ಪ್ರಸಿದ್ಧ ಭೋಗನಂದೀಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಏಕಲವ್ಯ ನಗರದ ಚಂದು (25) ಮತ್ತು ಮಂಡ್ಯ ತಾಲ್ಲೂಕು ಹಿಂಡುವಾಳ ಗ್ರಾಮದ ಆರ್.ಸುಮಂತ್ (21) ಬಂಧಿತರು. ದೊಡ್ಡಬಳ್ಳಾಪುರದಿಂದ ರಾಜಘಟ್ಟದ ಹಾದಿಯಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜ.30ರ ರಾತ್ರಿ ದೇವಾಲಯದ ಗರ್ಭಗುಡಿ ಮುಂಭಾಗದಲ್ಲಿದ್ದ ಎರಡು ಹುಂಡಿಗಳನ್ನು ಹೊಡೆದು ಹಣವನ್ನು ಆರೋಪಿಗಳು ದೋಚಿದ್ದರು.

6,700 ನಗದು, ಬೈಕ್, ಎರಡು ಕಬ್ಬಿಣದ ರಾಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಮತ್ತಷ್ಟು ದೇಗುಲಗಳಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಕೆ.ಆರ್.ಪೇಟೆ ತಾಲ್ಲೂಕು ಸಾಸಲು ಗ್ರಾಮದ ಸೋಮೇಶ್ವರ ಮತ್ತು ಶಂಭುಲಿಂಗೇಶ್ವರ ದೇವಾಲಯದ ಮೂರು ಹುಂಡಿಗಳನ್ನು ದೋಚಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ. ಇವರ ವಿರುದ್ಧ ಬೆಂಗಳೂರು ನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಡಿವೈಎಸ್‌ಪಿ ಕೆ.ರವಿಶಂಕರ್, ಸಿಪಿಐ ಪ್ರಶಾಂತ್ ಮಾರ್ಗದರ್ಶನದಲ್ಲಿ ನಂದಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಸನಗೌಡ ಕೆ.ಪಾಟೀಲ್ ಹಾಗೂ ಸಿಬ್ಬಂದಿ ರವಿಕುಮಾರ್, ಪೆಂಚಲಪ್ಪ, ಬಾಲಕೃಷ್ಣ, ಮಧುಸೂದನ್, ವಿನಯ್ ಕುಮಾರ್, ಎಂ.ಎನ್.ಸುರೇಶ್, ವೆಂಕೋಬರಾವ್, ಮಧುಚಂದ್ರ, ಟಿ.ಕೆ.ಮಹೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಬಂಧಿಸಿದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಗದು ಬಹುಮಾನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.