ಶಿಡ್ಲಘಟ್ಟ: ನಂದಿನಿ ಪಾರ್ಲರ್ಗಳಲ್ಲಿ ನಂದಿನಿ ಹಾಲು, ಮೊಸರು ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಬೇಕು. ಇತರೆ ಬ್ರಾಂಡ್ನ ಹಾಲು ಅಥವಾ ಹಾಲಿನ ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಎಚ್ಚರಿಕೆ ನೀಡಿದರು.

ಶಾಸಕ ಬಿ.ಎನ್. ರವಿಕುಮಾರ್ ಅವರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಂದಿನಿ ಪಾರ್ಲರ್ಗಳಲ್ಲಿ ನಂದಿನಿಯ ಉತ್ಪನ್ನಗಳಷ್ಟೆ ಮಾರಾಟ ಮಾಡಬೇಕು. ಆದರೆ ಕಮಿಷನ್ ಆಸೆಗೆ ಬಿದ್ದು, ಪಾರ್ಲರ್ ಮಾಲೀಕರೇ ನಂದಿನಿ ಉತ್ಪನ್ನಗಳ ಬದಲು ಇತರೆ ಬ್ರಾಂಡ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನಂದಿನಿ ಪಾರ್ಲರ್ಗಳಿಗೆ ಗ್ರಾಹಕರು ಬಂದಾಗ ನಂದಿನಿ ಉತ್ಪನ್ನಗಳ ಬದಲಿಗೆ ಇತರೆ ಕಂಪನಿ ಉತ್ಪನ್ನಗಳನ್ನು ಮಾರಾಟ ಮಾಡುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಅಧಿಕಾರಿಗಳು ಆಗಾಗ್ಗೆ ಪಾರ್ಲರ್ಗಳನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಡಾ.ಧನಂಜಯರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ತಾದೂರು ರಘು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-1386278876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.