ಶನಿವಾರ, ಸೆಪ್ಟೆಂಬರ್ 26, 2020
23 °C
ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಭಿಮತ

ಗೌರಿಬಿದನೂರು | ಅಂತರ್ಜಲ ಹೆಚ್ಚಿಸಲು ‘ನರೇಗಾ’ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡುತ್ತಿರುವ ಘನ ತ್ಯಾಜ್ಯ  ವಿಲೇವಾರಿ ಘಟಕ, ಆರೋಗ್ಯ ಕೇಂದ್ರ ಮತ್ತು ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ವಿವಿಧ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅತೀಕ್, ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಸಾರ್ವಜನಿಕರು ನರೇಗಾ ಯೋಜನೆಯ ಬಗ್ಗೆ ಮಾಹಿತಿ ಪಡೆದು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕೊರೊನಾ ಸಂಕಷ್ಟದ ಸಮಯದಲ್ಲಿ‌ ನರೇಗಾ ಯೋಜನೆಯ ಮೂಲಕ ಸಾಕಷ್ಟು ಉದ್ಯೋಗ ಅವಕಾಶ ಕಲ್ಪಿಸಲಾಗಿದೆ. ಯುವಕರು ನರೇಗಾ ಕಾಮಗಾರಿಗಳಲ್ಲಿ‌ ಭಾಗವಹಿಸಿ ಉದ್ಯೋಗದ ಅವಕಾಶ ಪಡೆದು‌ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು. 

ಗಡಿ ಭಾಗದ ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಯೋಜನೆಯನ್ನು ಉಪಯೋಗಿಸಿಕೊಂಡು ಅಂತರ್ಜಲದ ಮಟ್ಟ ಕಾಪಾಡಿರುವುದು ಹಾಗೂ ಪ್ರಗತಿಪರ ರೈತರು ತಮ್ಮ ಜಮೀನಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆದಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

ಇದೇ ವೇಳೆ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿ ‌ವ್ಯಾಪ್ತಿಯಲ್ಲಿನ ಪುನಶ್ಚೇತನ ಕಾಮಗಾರಿಗಳು, ಸಬ್ಬನಹಳ್ಳಿಯಲ್ಲಿ ಗ್ರಾಮೀಣ ಆರೋಗ್ಯ ಸೇವಾ ಕೇಂದ್ರ ಹಾಗೂ ಪ್ರಗತಿಪರ ರೈತ ನಾಸಿರ್ ಜಮೀನಿನಲ್ಲಿ ಪಪ್ಪಾಯ ಬೆಳೆಯನ್ನು ವೀಕ್ಷಿಸಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನೋಮೇಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಲೋಕೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನರೇಗಾ ಎಡಿ ಪಿ.ಚಿನ್ನಪ್ಪ, ನೀರು ಸರಬರಾಜು ಎಇಇ ಆದಿನಾರಾಯಣಪ್ಪ, ತೋಟಗಾರಿಕಾ ನಿರ್ದೇಶಕರಾದ ಎಸ್.ರವಿಕುಮಾರ್, ಎಂಜಿನಿಯರ್ ಮಂಜುನಾಥ್, ಪಿಡಿಒ ಬಾಲಕೃಷ್ಣ, ಎಸ್.ಮಲ್ಲಿಕಾರ್ಜುನ ಸ್ವಾಮಿ, ಈರೇಗೌಡ, ನವೀನ್‌ಕುಮಾರ್, ಕೃಷ್ಣಮೂರ್ತಿ, ಆದಿಮೂರ್ತಿ, ಅಮರ ನಾರಾಯಣರೆಡ್ಡಿ, ನವೀನ್, ನಾರಾಯಣಸ್ವಾಮಿ, ಆದಿನಾರಾಯಣಪ್ಪ, ನಾಗರಾಜು, ನಟರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು