ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ: 200 ದಿನ ಉದ್ಯೋಗ ನೀಡಿ

Last Updated 4 ಜೂನ್ 2020, 17:26 IST
ಅಕ್ಷರ ಗಾತ್ರ

ಗುಡಿಬಂಡೆ: ಲಾಕ್‌ಡೌನ್‌ನಿಂದಾಗಿ ಬಡಜನರು, ಕೃಷಿ ಕೂಲಿಕಾರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನರೇಗಾ ಯೋಜನೆಯಡಿ 200 ದಿನ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯೆ ಸಾವಿತ್ರಮ್ಮ ಒತ್ತಾಯಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯತಿಯ ಮುಂಭಾಗ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳು ನರೇಗಾ ಯೋಜನೆಯಡಿ ‌ಕೆಲಸ ನೀಡಲು ವಿಳಂಬ ಮಾಡುತ್ತಿವೆ. ಕೂಲಿ ಮೊತ್ತವನ್ನು ₹ 600ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಾಂತ ರೈತ ಸಂಘದ ಹೆಚ್.ಪಿ. ಲಕ್ಷ್ಮೀನಾರಾಯಣ, ಮುಖಂಡರಾದ ಶ್ರೀನಿವಾಸ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT