ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ನರೇಗಾದಡಿ ವಿವಿಧ ಅಭಿವೃದ್ದಿ ಕಾಮಗಾರಿ ವೀಕ್ಷಣೆ

Published 16 ಡಿಸೆಂಬರ್ 2023, 13:23 IST
Last Updated 16 ಡಿಸೆಂಬರ್ 2023, 13:23 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳುವಾಗ ಯಾವುದೇ ಕಾರಣಕ್ಕೂ ನೀತಿ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ ತಿಳಿಸಿದರು.

ತಾಲ್ಲೂಕಿನ ಪಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಶುಕ್ರವಾರ ವೀಕ್ಷಿಸಿ ಅವರು ಮಾತನಾಡಿದರು.

ನರೇಗಾ ಕಾಮಗಾರಿಗಳ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕಾಲ ಕಾಲಕ್ಕೆ ರೂಪಿಸುವ ಕಾನೂನುಗಳನ್ನು ತಪ್ಪದೆ ಪಾಲಿಸಬೇಕು. ತಪ್ಪಿದಲ್ಲಿ ಮುಖ್ಯವಾಗಿ ಅನುಷ್ಠಾನಾಧಿಕಾರಿಗಳು ಕಾನೂನಿನ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಹುಜನರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಬೇಕು ಮತ್ತು ಕ್ರಿಯಾ ಯೋಜನೆ ರೂಪಿಸಬೇಕು. ಜತೆಗೆ ವೈಯಕ್ತಿಕ ಕಾಮಗಾರಿಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ನರೇಗಾ ಯೋಜನೆಯಡಿ ಕುಂಟೆಯನ್ನು ಅಭಿವೃದ್ಧಿಪಡಿಸಿ ನಿರ್ಮಾಣ ಮಾಡುತ್ತಿರುವ ಕಲ್ಯಾಣಿ, ಮೋರಿ, ಉದ್ಯಾನವನ ಮುಂತಾದ ಕಾಮಗಾರಿಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಯೊಂದಿಗೆ ವೀಕ್ಷಿಸಿ ಕೆಲವೊಂದು ಸಲಹೆ ಸೂಚನೆ ನೀಡಿದರು. ಸಹಾಯಕ ನಿರ್ದೆಶಕ ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT