ಗುಡಿಬಂಡೆ: ಆಧುನಿಕತೆ, ಮೊಬೈಲ್ ಮೊದಲಾದವುಗಳ ಅತಿಯಾದ ಬಳಕೆಯಿಂದ ಯುವಜನರಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ನಿವೃತ್ತ ತಹಶೀಲ್ದಾರ್ ವಿಜಯ್ ಕುಮಾರ್ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಯು ತನ್ನ ಆಲೋಚನಾ ಕ್ರಮವನ್ನು ರೂಢಿಸಿಕೊಳ್ಳಲು ಮತ್ತು ಜೀವನ ರೂಪಿಸಿಕೊಳ್ಳಲು ಪುಸ್ತಕಗಳು ಸಹಕಾರಿ. ನಮ್ಮ ಪೂರ್ವಜರು ತಮ್ಮ ಅನುಭವಗಳನ್ನು ಪುಸ್ತಕ ರೂಪದಲ್ಲಿ ಬರೆದು ಸಂಗ್ರಹಿಸಿದ್ದಾರೆ. ಅವುಗಳನ್ನು ಓದುವ ಮೂಲಕ ನಮ್ಮ ಬುದ್ದಿ ಹಾಗೂ ಅವರ ಮಾರ್ಗದರ್ಶನದಲ್ಲಿ ನಡೆಯಲು ಸಹಕಾರಿಯಾಗುತ್ತದೆ. ಇಂದು ಗ್ರಂಥಾಲಯಗಳಲ್ಲಿ ಕೇವಲ ವಯೋವೃದ್ಧರು ಮಾತ್ರ ಕಾಣುತ್ತಾರೆ
ಎಂದರು.

ಪರಿಸರ ವೇದಿಕೆಯ ಮುಖಂಡ ಆನಂದ್ ಮಾತನಾಡಿ, ನಾಗರೀಕತೆ ಹಾಗೂ ಜ್ಞಾನದ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಅಪಾರ. ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿನ ಪುಸ್ತಕಗಳ ಪ್ರಯೋಜನ ಪಡೆಯಬೇಕು. ಪ್ರಸ್ತುತ ಪಟ್ಟಣದಲ್ಲಿರುವ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲದೇ ಅಧೋಗತಿಗೆ ತಲುಪಿದೆ. ಸ್ಥಳೀಯ ಪ್ರತಿನಿಧಿಗಳು ಕೂಡಲೇ ಸುಸಜ್ಜಿತವಾದ ಹಾಗೂಆಧುನಿಕ ರೀತಿಯ ಗ್ರಂಥಾಲಯ ಸ್ಥಾಪನೆ ಮಾಡಲು ಮುಂದಾಗಬೇಕು
ಎಂದರು.

ಗ್ರಂಥಾಲಯದ ಸಿಬ್ಬಂದಿಗಳಾದ ಅಲ್ತಾಫ್, ನರಸಿಂಹಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.