ಶನಿವಾರ, ಜನವರಿ 18, 2020
19 °C

ನವೋದಯ ಪರೀಕ್ಷೆ: 349 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಗೆ 2020-–21ನೇ ಸಾಲಿನ ಪ್ರವೇಶಕ್ಕಾಗಿ ಶನಿವಾರ ಜಿಲ್ಲೆಯ 10 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ಸುಗಮವಾಗಿ ನಡೆಯಿತು.

ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೈಕಿ 2,267 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶನಿವಾರ 1,918 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 349 ವಿದ್ಯಾರ್ಥಿಗಳು ಗೈರಾದರು.

ಪರೀಕ್ಷೆಗಾಗಿ ಗೌರಿಬಿದನೂರಿನಲ್ಲಿ ಮೂರು, ಬಾಗೇಪಲ್ಲಿ, ಚಿಂತಾಮಣಿ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಎರಡು ಮತ್ತು ಚಿಕ್ಕಬಳ್ಳಾಪುರ, ಗುಡಿಬಂಡೆ, ಶಿಡ್ಲಘಟ್ಟದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಜಿ.ನಾಗೇಶ್‌ ಅವರ ಉಸ್ತುವಾರಿಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು